Posts

ಅಪ್ರಾಪ್ತೆಗೆ ಅತ್ಯಾಚಾರ ಮಾಡಿದಾತನಿಗೆ 7 ವರ್ಷಗಳ ಕಠಿಣ ಶಿಕ್ಷೆ; 10 ಸಾವಿರ ರೂ‌ ದಂಡ

1 min read

ಬೆಳ್ತಂಗಡಿ; 2018 ಮೇ ತಿಂಗಳ 8 ರಂದು ದೂರದ ಸಂಬಂಧಿಯೂ ಆಗಿರುವ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ 7 ವರ್ಷಗಳ ಕಠಿಣ ಜೈಲುಶಿಕ್ಷೆ ಮತ್ತು10 ಸಾವಿರ ರೂ. ದಂಡ ವಿಧಿಸಿ ತೀರ್ಪಿತ್ತಿದೆ.

ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ನಿವಾಸಿ ಸತೀಶ್ ಯಾನೆ ಶಶಿ ( 27 ವ.) ಎಂಬಾತನೇ ಇದೀಗ ಜೈಲು ಶಿಕ್ಷೆಗೊಳಗಾದವನು. ಈತ 2018 ರಿಂದ ಈ ಪ್ರಕರಣದಲ್ಲಿ ಪೋಕ್ಸೋ ಕಾಯ್ದೆಯಡಿ ಕೇಸು ಎದುರಿಸುತ್ತಿದ್ದ.

ಕಾಶಿಪಟ್ಣ ಗ್ರಾಮದ ಆರೋಪಿಯು ಅಜ್ಜಿಮನೆಯಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಮರೋಡಿ ಗ್ರಾಮಕ್ಕೆ ಬಂದಿದ್ದ ವೇಳೆ ದೂರದ ಸಂಬಂಧಿಯೂ ಆದ ಯುವತಿಯನ್ನು ಪರಿಚಯಿಸಿಕೊಂಡಿದ್ದ. ಆತ್ಮೀಯವಾಗಿ ವ್ಯವಹರಿಸಿ ಮೊಬೈಲ್ ನಂಬರ್ ಪಡೆದಿದ್ದ. ಆ ಬಳಿಕ ಆಕೆಯ ಜೊತೆ ದೂರವಾಣಿ ಸಂಪರ್ಕದಲ್ಲಿ ಮುಂದುವರಿಯುತ್ತಾ ಪರಿಚಯ ಪ್ರೇಮವಾಗಿ ತಿರುಗಿತ್ತು. ಅದೇ ಹಿನ್ನೆಲೆಯಲ್ಲಿ ಆಕೆಯನ್ನು ದುರ್ಬಳಕೆ ಮಾಡಿಕೊಂಡಿದ್ದ. ಆರೋಪಿ ಆಕೆಯನ್ನು ಪುಸಲಾಯಿಸಿ ಕಾಡಿಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ.

 ಘಟನೆಯ ಬಗ್ಗೆ ಅಂದು ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಆಗಿದ್ದ ನಾಗೇಶ್ ಕದ್ರಿ ಅವರು ಪ್ರಕರಣ ದಾಖಲಿಸಿಕೊಂಡು ಸಮಗ್ರ ತನುಖೆ ನಡೆಸಿ ಸೂಕ್ತ ಸಾಕ್ಷಿ ಆಧಾರಗಳ ಸಹಿತ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ತನಿಖೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ವೆಂಕಟೇಶ್ ನಾಯ್ಕ ಸಹಕಾರ ನೀಡಿದ್ದರು. ಇದೀಗ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ - ಪೋಕ್ಸೋ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ ಆರೋಪಿಯ ಆರೋಪ ಸಾಬೀತಾಗಿದ್ದು ಅಪರಾಧಿ ಎಂದು ತೀರ್ಪು ನೀಡಿದೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

You may like these posts

Post a Comment