ಬೆಳ್ತಂಗಡಿ: ಉಜಿರೆಯ ಉದ್ಯಮಿ ಬಿಜೊಯ್ ಅವರ ಪುತ್ರ, ಎಂಟರ ಹರೆಯದ ಬಾಲಕ ಅನುಭವ್ ಅವರನ್ನು ಕೋಲಾರದಲ್ಲಿ ಸುರಕ್ಷಿತವಾಗಿ ಪತ್ತೆಹಚ್ಚವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಈ ಸಂಬಂಧ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಕೋಲಾರ ಜಿಲ್ಲೆಯ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಹರಣಕಾರರನ್ನು ಮಗುವಿನೊಂದಿಗೆ ವಿಶೇಷ ತಂಡ ಪೊಲೀಸರು ಶನಿವಾರ ಬೆಳಗ್ಗೆ 5 ರ ಹೊತ್ತಿಗೆ ಪತ್ತೆ ಹಚ್ಚಿದ್ದಾರೆ.ಬಾಲಕನನ್ನು ಬೆಳ್ತಂಗಡಿಗೆ ಕರೆತರಲಾಗುತ್ತಿದೆ. ಆರೋಪಿಗಳನ್ನೂ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು ಕೋಲಾರದಿಂದ ವಿಶೇಷ ತನಿಖಾ ತಂಡ ಪ್ರಯಾಣ ಆರಂಭಿಸಿದೆ.
ಕೋಲಾರದ ಮಾಲೂರು ತಾಲೂಕಿನ ಕೂರ್ನ ಹೊಸಹಳ್ಳಿ ಮನೆಯಲ್ಲಿ ಮಗುವನ್ನು ಬಚ್ಚಿಡಲಾಗಿತ್ತು. ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ ನೆರವಿಂದ ಮಂಗಳೂರಿನ ಪೊಲೀಸ್ ತಂಡ ಬಂಧನ ಕಾರ್ಯಾಚರಣೆ ನಡೆಸಿದೆ ಎಂದು ತಿಳಿದುಬಂದಿದೆ.
ಎಲೆಕ್ಟ್ರಾನಿಕ್ ಸಿಟಿ ಕೋಮಲ್, ಮಂಡ್ಯದ ಗಂಗಾಧರ್ ಸೇರಿದಂತೆ ನಾಲ್ವರು ಕಿಡ್ನಾಪರ್ಸ್ ಎಂದು ಪ್ರಾಥಮಿಕ ವರದಿ ಇದ್ದು, ಪೊಲೀಸ್ ಕಷ್ಟಡಿಯಲ್ಲಿ ಇನ್ನಷ್ಟು ಮಾಹಿತಿ ಬಹಿರಂಗವಾಗಲಿದೆ.