Posts

ಅಪ್ರಾಪ್ತೆಗೆ ಲೈಂಗಿಕ ಹಲ್ಲೆ; ಪೋಕ್ಸೋ‌ ಕಾಯ್ದೆಯಡಿ ಆರೋಪಿ ಬಂಧನ

1 min read

ಬೆಳ್ತಂಗಡಿ; ಉಪ್ಪಿನಂಗಡಿ ಸನಿಹದ ಹಿರೆಬಂಡಾಡಿ ನಿವಾಸಿ, ಅಜಯ್ (21 ವ‌.) ಎಂಬಾತನು ತನ್ನ ದೊಡ್ಡಮ್ಮನ ಮಗಳು, ಅಪ್ರಾಪ್ತ ವಯಸ್ಸಿನ ಯುವತಿಯನ್ನು ಅತ್ಯಾಚಾರ ಮಾಡಿ ಆಕೆಯನ್ನು ಗರ್ಭವತಿ ಮಾಡಿದ ಪ್ರಕರಣದಲ್ಲಿ ಇದೀಗ ಬಂಧಿತನಾಗಿದ್ದಾನೆ.

ಪುಂಜಾಲಕಟ್ಟೆ ಠಾಣೆಯಲ್ಲಿ ಈ‌ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಎಸ್.ಐ ಸೌಮ್ಯಾ ಅವರ ತಂಡ ಮಂಗಳವಾರ ಉಪ್ಪಿನಂಗಡಿ ಯಲ್ಲಿ ಬಂಧಿಸುವಲ್ಲಿ ಸಫಲರಾಗಿದ್ದಾರೆ.

ಬಂಟ್ವಾಳ ತಾಲೂಕು ವ್ಯಾಪ್ತಿಗೆ ಬರುವ ಸಂಬಂಧಿಯೂ ಆಗಿರುವ ಯುವತಿಯ ಜೊತೆಗೆ ಸಖ್ಯ ಬೆಳೆಸಿದ್ದ ಆರೋಪಿ ಆಕೆಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದ.‌ ಇದರ ಪರಿಣಾಮ‌ ಆಕೆ ಗರ್ಭಿಣಿಯಾಗಿದ್ದು, ಹೆರಿಗೆ ಬೇನೆಯಿಂದ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆಸ್ಪತ್ರೆಯ ದಾರಿ ಮಧ್ಯೆ ವಾಹನದಲ್ಲೇ ಆಕೆಯ ಮಗು ಸಾವನ್ನಪ್ಪಿತ್ತು. ಆರೈಕೆಗಾಗಿ ಪುತ್ತೂರು ಆಸ್ಪತ್ರೆಗೆ ಸೇರಿದ್ದ ಆಕೆಯ ವಿಚಾರದ ಬಗ್ಗೆ ಪುಂಜಾಲಕಟ್ಟೆ ಠಾಣೆಗೆ ಮಾಹಿತಿ ಬಂದ ಮೇರೆಗೆ ಅರೋಪಿ ಅಜಯ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು‌ ಇದೀಗ ಆತನನ್ನು ಬಂಧಿಸಿದ್ದಾರೆ‌. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯ ಆತನಿಗೆ‌ ಮುಂದಿನ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment