ಸಾಂದರ್ಭಿಕ ಚಿತ್ರ
ಬೆಳ್ತಂಗಡಿ: ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಮತ್ತು ಋಣಮುಕ್ತ ಹೋರಾಟ ಸಮಿತಿ ಸಹಿತ ನ್ಯಾಯವಾದಿ ಬಿ. ಎಂ ಭಟ್ ನಾಯಕತ್ವದ ಕಾರ್ಮಿಕ ಸಂಘಟನೆಗಳ ಜಂಟಿ ಆಶ್ರಯದಲ್ಲಿ, ಡಿ. 8 ರ ಅಖಿಲ ಭಾರತ ಬಂದ್ ಬೆಂಬಲಿಸಿ ಪೂರ್ವಾಹ್ನ 10 ಗಂಟೆಗೆ ಬೆಳ್ತಂಗಡಿ ಮಿನಿವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ನಡೆಯಲಿದೆ.
ಕೇಂದ್ರ ಸರಕಾರ ಕೈಗೆತ್ತಿಕೊಂಡಿರುವ ರೈತರ ಕರಾಳ ಕಾಯ್ದೆ ತಿದ್ದುಪಡಿ ವಿರೋಧಿಸಿ ಅದರ ಪರಿಣಾಮಗಳನ್ನು ಜನತೆಗೆ ಮನವರಿಕೆ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಪ್ರತಿಭಟನೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ, ನ್ಯಾಯವಾದಿ ಬಿ.ಎಮ್ ಭಟ್ ಮಾತನಾಡಲಿದ್ದಾರೆ.
ಹೋರಾಟದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್, ಮಾಜಿ ಸಚಿವ ಕೆ ಗಂಗಾಧರ ಗೌಡ, ಉಭಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಮತ್ತು ರಂಜನ್ ಜಿ ಗೌಡ ಮೊದಲಾದ ನಾಯಕರು ಮುಂದಾಳತ್ವ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.