ಬೆಳ್ತಂಗಡಿ; ಕರ್ನಾಟಕ ವಿಧಾನ ಸಭೆಯ ವಸತಿ ಸಚಿವರಾಗಿರುವ ವಿ ಸೋಮಣ್ಣ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರವಿವಾರ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಡಿ.ಸುರೇಂದ್ರ ಕುಮಾರ್, ಹರ್ಷೇಂದ್ರ ಕುಮಾರ್,ಸಚಿವರ ಜೊತೆಗೆ ಅವರ ಧರ್ಮಪತ್ನಿ ಶೈಲಾ ಸೋಮಣ್ಣ ಉಪಸ್ಥಿತರಿದ್ದರು