ಬೆಳ್ತಂಗಡಿ: ಸೋಮವಾರ ರಾತ್ರಿ ಉಜಿರೆ- ಚಾರ್ಮಾಡಿ ರಸ್ತೆಯ ಎಸ್.ಆರ್ ಬಾರ್ ಏಂಡ್ ರೆಸ್ಟೋರೆಂಟ್ ಮುಂಭಾಗದಲ್ಲಿ ನಡೆದ ರಸ್ತೆ ಅಪಘಾತ ದಲ್ಲಿ ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ ಶಿವ ಶಂಕರ್ ಕಾಮತ್(52ವ.) ಅವರು ಧಾರುಣವಾಗಿ ಮೃತಪಟ್ಟಿದ್ದಾರೆ
ರಸ್ತೆ ಬದಿ ತನ್ನ ವಾಹನ ನಿಲ್ಲಿಸಿದ ಅವರು ರಸ್ತೆ ದಾಟುತ್ತಿದ್ದ ಸಂದರ್ಭ ಆಕ್ಟಿವಾದಲ್ಲಿಬಂದ ವ್ಯಕ್ತಿ ತಾನು ಚಲಾಯಿಸುತ್ತಿದ್ದ ವಾಹನದಲ್ಲಿ ಇವರಿಗೆ ನೇರ ಡಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರ ಗಾಯಗೊಂಡಿದ್ದರು.
ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡುತ್ತಲೇ ಅವರು ದಾರಿಮಧ್ಯೆ ಅಸುನೀಗಿದರು.
ಅಪಘಾತದಲ್ಲಿ ಸ್ಕೂಟರ್ ಸವಾರನಿಗೂ ಗಾಯಗಳಾಗಿದ್ದು ಚಿಕಿತ್ಸೆ ಪಡೆಯತ್ತಿದ್ದಾರೆ.
ಮೃತ ಶಂಕರ್ ಕಾಮತ್ ಅವರು ಉಜಿರೆಯ ಸಂಧ್ಯಾ ಟ್ರೇಡರ್ಸ್ ಸಂಸ್ಥೆಯ ಸಿಬ್ಬಂದಿಯಾಗಿದ್ದು, ತಂದೆ, ತಾಯಿ ,ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.