ಮಂಗಳೂರು; ಪ್ರಚೋದನಕಾರಿ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ತೀರ್ಥಹಳ್ಳಿ ನಿವಾಸಿಗಳಾದ ಮುಹಮ್ಮದ್ ಶಾಹಿಕ್ (21ವ.), ಮಾಝ್ ಮುನೀರ್ (21ವ.) ಬಂಧಿತ ಆರೋಪಿಗಳು.
ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಅಧಿಕೃತ ಮಾಹಿತಿ ನೀಡಿದರು. ಮೊದಲಿನಿಂದಲೂ ಸ್ನೇಹಿತರಾಗಿರುವ ಆರೋಪಿಗಳು
ಎಲ್ಲರಿಗೂ ಕಾಣುವ ಪ್ರದೇಶದ ಗೋಡೆಯಲ್ಲಿ ಪ್ರಚಾರಕ್ಕಾಗಿ ಈ ಕೃತ್ಯ ನಡೆಸಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಈ ಪೈಕಿ ಶಾಹಿಕ್ ಸೇಲ್ಸ್ ಮ್ಯಾನ್ ಆಗಿದ್ದು, ಮುನೀರ್ ನಗರದಲ್ಲೇ ಬಿ.ಟೆಕ್ ಇಂಜಿನಿಯರ್ ವಿದ್ಯಾರ್ಥಿಯಾಗಿದ್ದಾನೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆಯು ಕೇಂದ್ರ ಉಪ ವಿಭಾಗದ ಎಸಿಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿತು. ಪ್ರಚೋದನಕಾರಿ ಗೋಡೆ ಬರಹಕ್ಕೆ ಸಂಬಂಧಿಸಿ ಕದ್ರಿ, ಬಂದರ್ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.