ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಗಣಿತ ಶಾಸ್ತಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನುಮದಿನದ ಸ್ಮರಣಾರ್ಥ ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ರಾಮಾನುಜನ್‌ರವರ ಬಗ್ಗೆ ಮಾತನಾಡಿ, ಗಣಿತ ಕ್ಷೇತ್ರದಲ್ಲಿ ನಡೆಸಿದ ಸಂಶೋಧನಾ ಕೊಡುಗೆಗಳನ್ನು ವಿವರಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಮತ್ತು ವೆಬಿನಾರ್ ಆಯೋಜಿಸಲಾಗಿತ್ತು.
ಕಾಲೇಜಿನ ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ| ವಿದ್ಯಾ ಅವರು ಶ್ರೀನಿವಾಸ ರಾಮಾನುಜನ್ ಅವರ ಜೀವನ ಚರಿತ್ರೆಯ ಕುರಿತಾಗಿ ವಿವರಿಸಿದರು.