ಬೆಳ್ತಂಗಡಿ; ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ಊ ಸದಸ್ಯರಿಗೆ ತರಬೇತಿ ಕಾರ್ಯಕ್ರಮವು ಜ.21 ರಂದು ನಡೆಯಿತು.
ಎಸ್‌ಡಿಎಂಸಿ ಉಪಾಧ್ಯಕ್ಷೆ ನಂದಿನಿ ಗಣರಾಜ್ ದೀಪಬೆಳಗಿ ಉದ್ಘಾಟನೆ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಗ್ರಾ.ಪಂ ಸದಸ್ಯರು ಹಾಗೂ ಎಸ್‌ಡಿಎಂಸಿ ಸದಸ್ಯರೂ ಆಗಿರುವ ಉದಯ ಹೆಗ್ಡೆ ನಾರಾವಿ ಶುಭ ಕೋರಿದರು. ಶಾಲಾ ನೂತನ ಮುಖ್ಯೋಪಾಧ್ಯಾಯಿನಿ ಸುಶೀಲಾ ಅವರು ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿ ಶಾಲಾ ಅಭಿವೃದ್ಧಿ ಯಲ್ಲಿ ಎಲ್ಲರ ಸಹಕಾರ ಬಯಸಿದರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಆನಂದ ಭಟ್ ಅವರು ತರಬೇತಿ ಶಿಬಿರ ನಡೆಸಿಕೊಟ್ಟರು.
ಶಿಕ್ಷಕಿ ಶಾಂಭವಿ ಕುಮಾರಿ ಸ್ವಾಗತಿಸಿದರು. ನಿಕಟಪೂರ್ವ ಮುಖ್ಯ ಶಿಕ್ಷಕ ಕೋದಂಡರಾಮ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಶಾಲಾ ಮಕ್ಕಳು ಪ್ರಾರ್ಥನೆ ಹಾಡಿದರು.
ಶಿಕ್ಷಕಿ ಆಶಲತಾ ಧನ್ಯವಾದವಿತ್ತರು.