Posts

ತಂದೆಯೇ ಚಲಾಯಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿದ ಉಜಿರೆಯ ಎಂಟರ ಹರೆಯದ ಬಾಲಕ‌ ದಾರುಣ ಬಲಿ

1 min read

ಬೆಳ್ತಂಗಡಿ; ಉಜಿರೆ ಅತ್ತಾಜೆ‌ ನಿವಾಸಿ ಇಬ್ರಾಹಿಂ ಇಬ್ಬಿ ಅವರ ಪುತ್ರ , ಉಜಿರೆ ಹಳೆಪೇಟೆ ಬದ್ರುಲ್ ಹುದಾ ಮದರಸದ‌ ಮೂರನೇ ತರಗತಿ ವಿದ್ಯಾರ್ಥಿ ಮುರ್ಷಿದ್ (9ವ.) ತನ್ನ ತಂದೆಯೇ ಚಲಾಯಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಸಂಜೆಯ ವೇಳೆ ಮೂಡಬಿದ್ರೆಯಲ್ಲಿ ನಡೆದಿದೆ.

ಉಜಿರೆ ಅತ್ತಾಜೆ ಇಬ್ರಾಹಿಂ ಮತ್ತು ರಹಿಮತ್ ದಂಪತಿಯ ಇಬ್ಬರು ಮಕ್ಕಳಲ್ಲಿ‌ ಮೊದಲನೆಯವನಾಗಿದ್ದ ಬಾಲಕ ಮುರ್ಷಿದ್ ತನ್ನ ತಂದೆಯ ಜೊತೆಗೆ ಮೂಡಬಿದ್ರೆಯ ಕಲ್ಲಿನ‌ಕೋರೆಗೆ ಹೋಗುವಾಗ ಬಾಲಕನೂ ಜೊತೆಗೆ ತೆರಳಿದ್ದನೆಂದು ಹೇಳಲಾಗಿದೆ. 

ತಂದೆಯೇ ಚಾಲಕನಾಗಿ ಲಾರಿ ಚಲಾಯಿಸಿದ ವೇಳೆ ಬಾಲಕ ಆಕಸ್ಮಿಕವಾಗಿ ಅದರ ಚಕ್ರದಡಿ ಸಿಲುಕಿ ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಉಜಿರೆಯ ಕೊಟ್ರೋಡಿ ಕಾಂಪೌಂಡ್ ನ ರೈಫಾ ಗಾರ್ಡನ್ ಫ್ಲಾಟ್‌ನಲ್ಲಿ ನೆಲೆಸಿದ್ದ ದಂಪತಿಗೆ ನಾಲ್ಕು ವರ್ಷ ಪ್ರಾಯದ ಸಫಾ ಎಂಬ ಪುತ್ರಿ ಇದ್ದಾರೆ.

ಘಟನೆ ನಡೆದ ತಕ್ಷಣ ಮೂಡಬಿದ್ರೆ ಆಸ್ಪತ್ರೆಗೆ ಬಾಲಕನ್ನು ಸಾಗಿಸಲಾಗಿತ್ತಾದರೂ ಅದಾಗಲೇ ಪ್ರಾಣಪಕ್ಷಿ ಹಾರಿಹೋಗಿತ್ತು.

ಅಲ್ಲೇ ಮರಣೋತ್ತರ ಪರೀಕ್ಷೆ ಕೈಗೊಂಡು ರಾತ್ರಿ 12.30 ರ ವೇಳೆಗೆ ಉಜಿರೆ ಮಸ್ಜಿದ್ ದಫನ ಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ..  

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment