ಬೆಳ್ತಂಗಡಿ: ಕಳೆದ ಮೂರು ವರ್ಷಗಳಿಂದ ಇಲ್ಲಿನ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಸಂದೇಶ್ ಪಿ.ಜಿ. ಅವರನ್ನು ಬಜ್ಪೆ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಸೋಮವಾರ ಬಿಡುಗಡೆಯಾದ ಸರ್ಕಲ್ ಇನ್ಸ್‌ಪೆಕ್ಟರ್ ಗಳ ವರ್ಗಾವಣೆ ಪಟ್ಟಿಯಲ್ಲಿ ಸಂದೇಶ್ ಅವರ ಹೆಸರೂ ಒಳಗೊಂಡಿದೆ.
ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ, ವೇಣೂರು, ಪುಂಜಾಲಕಟ್ಟೆ, ಧರ್ಮಸ್ಥಳ ಠಾಣೆಗಳನ್ನೊಳಗೊಂಡ ವಿಶಾಲ ವ್ಯಾಪ್ತಿಯಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಸಮರ್ಥವಾಗಿ ಕಾರ್ಯನಿರ್ವಸಿದ್ದ ಸಂದೇಶ್ ಅವರು ಖಡಕ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದವರು.
ತಾಲೂಕಿನಲ್ಲಿ ನಡೆಯುತ್ತಿದ್ದ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ತನ್ನದೇ ಶೈಲಿಯಲ್ಲಿ ಕೆಲಸ ಮಾಡುತ್ತಿದ್ದ ಅವರು ಕಳ್ಳರ ಪಾಲಿಗೆ ಸಿಂಹಸ್ವಪ್ನ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಮೂಲತಃ ಚಿಕ್ಕಮಗಳೂರು ನವರಾದ ಅವರು ಪ್ರಸ್ತುತ ಮೂಡಬಿದ್ರೆಯಲ್ಲಿ ನೆಲೆಸಿದ್ದಾರೆ.