ಬೆಳ್ತಂಗಡಿ : ದ.ಕ ಜಿಲ್ಲಾಧಿಕಾರಿ ಆದೇಶದಂತೆ ಹೊರಜಿಲ್ಲೆಗಳಿಂದ ದ.ಕ. ಜಿಲ್ಲೆಯ ಧರ್ಮಸ್ಥಳಕ್ಕೆ ಬರುವ ಪ್ರವಾಸಿಗರ ವಾಹನಗಳನ್ನು ಕಳದ ರಾತ್ರಿ ಪೊಲೀಸರು ಹಿಂದಕ್ಕೆ ಕಳುಹಿಸಿದ್ದಾರೆ .
ಗುಂಡ್ಯ ಚೆಕ್ ಪೋಸ್ಟ್ ನಲ್ಲಿ ಶನಿವಾರ ರಾತ್ರಿಯಿಂದ ಪೊಲೀಸರು ವಾಹನ ತಪಾಸಣೆ ಬಿಗಿಗೊಳಿಸಿದ್ದರು .
ದ.ಕ. ಜಿಲ್ಲಾಧಿಕಾರಿಯವರ ಆದೇಶದಂತೆ ಜಿಲ್ಲಾ ಗಡಿಗಳಲ್ಲಿ ಕಟ್ಟುನಿಟ್ಟಿನ ವಾಹನ ತಪಾಸಣೆಯನ್ನು ನಡೆಸಲಾಗುತ್ತಿದ್ದು, ಚಾರ್ಮಾಡಿಯಲ್ಲೂ, ಉಜಿರೆಯಲ್ಲೂ ತಪಾಸಣೆ ಬಿಗುಗೊಳಿಸಲಾಗಿತ್ತು.
ಈ ವೇಳೆ ಯಾವುದೇ ಅಗತ್ಯ ದಾಖಲೆಗಳಿಲ್ಲದೆ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಹಿಂದಿನ ಎಲ್ಲಾ ಪೊಲೀಸ್ ಚೆಕ್‌ಪೋಸ್ಟ್‌ಗಳ ಮೂಲಕ ದಾಟಿ ಬಂದಿದ್ದ ವಾಹನಗಳನ್ನು ನಿರ್ದಾಕ್ಷಿಣ್ಯವಾಗಿ ಹಿಂದಕ್ಕೆ ಕಳುಹಿಸಲಾಯಿತು. ಈಕಾರ್ಯಾಚರಣೆಯನ್ನು ಸ್ವತಹಾ ಎಸ್.ಪಿ ಯವರೇ ಮೇಲುಸ್ತುವಾರಿ ನಡೆಸುತ್ತಿದ್ದು, ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಕಡಿಮೆಗೊಳಿಸಲು ಶತಪ್ರಯತ್ನ ಪಡುತ್ತಿರುವ ಜಿಲ್ಲಾಡಳಿತದ ಈ ಕ್ರಮದಿಂದ ಭಕ್ತಾದಿಗಳಿಗೆ ಕೊಂಚ ಅಡಚಣೆಯಾದರೂ ಈ ಕ್ರಮ ಅನಿವಾರ್ಯವಾಗಿದೆ ಎಂದು ಪೊಲೀಸ್‌ಇಲಾಖೆ ದೃಢಪಡಿಸಿದೆ.