ಬೆಳ್ತಂಗಡಿ; ಕೊರೊನಾ ನಿಯಂತ್ರಣಕ್ಕೆ ಪೂರಕವಾಗಿ ತಾಲೂಕಿನಲ್ಲಿರುವ ಲಸಿಕಾ ಕೇಂದ್ರಗಳನ್ನು ಬಿಜೆಪಿ ನಾಯಕರು, ಕಾರ್ಯಕರ್ತರು ಪ್ರಚಾರಕ್ಕಾಗಿ ದುರುಪಯೋಗ ಪಡಿಸುತ್ತಿದ್ದು ಹಾಗೂ ಲಸಿಕಾ ಕೇಂದ್ರದ ಅಧಿಕಾರಿಗಳಿಗೆ ಒತ್ತಡ ಹೇರುತ್ತಿರುವ ವಿಧ್ಯಾಮಾನ ತಾಲೂಕಿನಾದ್ಯಂತ ನಡೆಯುತ್ತಿದೆ. ಆಮೂಲಕ ಸಾಮಾನ್ಯ ನಾಗರಿಕರಿಗೆ ಲಸಿಕೆ ಲಭ್ಯವಿರದ ಪರಿಸ್ಥಿತಿಯನ್ನು ವ್ಯವಸ್ಥಿತವಾಗಿ ಸೃಷ್ಟಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಲಸಿಕೆ ಕೇಂದ್ರಗಳಲ್ಲಿ ಆರೋಗ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳೇ ಕಾರ್ಯನಿರ್ವಹಿಸುವ ಮೂಲಕ ಪಾರದರ್ಶಕತೆ ಕಾಯ್ದುಕೊಳ್ಳಲು ಕ್ರಮ ವಹಿಸುವಂತೆ ಮಂಗಳವಾರ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಇದರ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್ ಕುರ್ತೋಡಿ,ಗ್ರಾಮೀಣ ಅಧ್ಯಕ್ಷ ರಂಜನ್ ಜಿ ಗೌಡ,ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು,ಜಿಲ್ಲಾ ಕಾಂಗ್ರೆಸ್ ಸದಸ್ಯ ಜಗದೀಶ್ ಡಿ,ಕೆಪಿಸಿಸಿ ಎಸ್ಸಿ ಘಟಕದ ಸದಸ್ಯ ನಾಗರಾಜ್ ಲಾಯಿಲ,ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್,ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಸದಸ್ಯ ಪ್ರಭಾಕರ್ ಶಾಂತಿಕೋಡಿ,ಬ್ಲಾಕ್ ಕಾಂಗ್ರೆಸ್(ಗ್ರಾಮೀಣ)ಕಾರ್ಯದರ್ಶಿ ದಯಾನಂದ ಬೆಳಾಲು,ತಾಲೂಕು ಎಸ್ಸಿ ಘಟಕದ ಅಧ್ಯಕ್ಷ ಬಿ.ಕೆ ವಸಂತ್,ಸಾಮಾಜಿಕ ಜಾಲತಾಣ ಅಧ್ಯಕ್ಷ ಸಂದೀಪ್ ಎಸ್ ನೀರಲ್ಕೆ ಅರ್ವ,ನಗರ ಪಂಚಾಯತ್ ಮಾಜಿ ಸದಸ್ಯ ಮೆಹಬೂಬ್ ಮತ್ತಿತರರು ಉಪಸ್ಥಿತರಿದ್ದರು. ಕೊರೊನಾ ಮುಂಜಾಗ್ರತಾ ನಿಯಮಾವಳಿಯ ಪಾಲನೆಯ ಮೂಲಕ ಮನವಿ ಸಲ್ಲಿಸಲಾಯಿತು.