ಬೆಳ್ತಂಗಡಿ; ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಪೂರ್ಣಕಾಲಿಕ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಭುವನೇಶ್ ಜೆ ಯವರಿಗೆ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ಗುರುವಾರ ಸ್ವಾಗತಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ವಹಿಸಿ, ಸಂಘದ ವತಿಯಿಂದ ಶಾಲು ಹಾರ ಪುಷ್ಪಾರ್ಪಣೆ ಯೊಂದಿಗೆ ನೂತನ ಅಧಿಕಾರಿಯನ್ನು ಬರಮಾಡಿಕೊಂಡರು.
ತಾ. ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ತಾರಾಕೇಸರಿ, ಶಿಕ್ಷಣ ಸಂಯೋಜಕ ಸುಭಾಷ್ ಜಾದವ್, ದೈಹಿಕ ಶಿಕ್ಷಣ ಶಿಕ್ಷಕರ ಮಾತೃ ಸಂಘದ ಅಧ್ಯಕ್ಷ ಯಶೋಧರ ಸುವರ್ಣ, ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶಂಕರ ದೇವಾಡಿಗ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪ್ರಭಾರ ಅಧ್ಯಕ್ಷ ಜಯರಾಜ್ ಜೈನ್, ಸಂಚಾಲಕ ಅಜಿತ್ ಕುಮಾರ್ ಕೊಕ್ರಾಡಿ, ತಾಲೂಕು ಯುವಜನ ಸೇವಾ ಕ್ರೀಡಾ ಅಧಿಕಾರಿ ಪ್ರಭಾಕರ್ ನಾರಾವಿ, ದೈಹಿಕ ಶಿಕ್ಷಣ ಶಿಕ್ಷಕರ ಮಾತೃ ಸಂಘದ ಉಪಾಧ್ಯಕ್ಷ ಕೃಷ್ಣಾನಂದ ರಾವ್, ಕಾರ್ಯದರ್ಶಿ ಗಂಗಾಧರ್ ಕುಪ್ಪೆಟ್ಟಿ, ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ್ ಕರ್ಕೇರ, ಉಪಾಧ್ಯಕ್ಷ ಪ್ರವೀಣ್ ಕುಮಾರ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರತಿನಿಧಿ ಆರತಿ, ಸಂಘದ ಪದಾಧಿಕಾರಿಗಳಾದ ಅಶೋಕ್ ಎಸ್ ವಿ, ವಿಶ್ವನಾಥ್ ಪುತ್ತಿಲ, ಪಂಚಾಕ್ಷರಪ್ಪ, ಅಜಿತ್ ಶೆಟ್ಟಿ ಗರ್ಡಾಡಿ, ಪ್ರವೀಣ್ ಗರ್ಡಾಡಿ ಮುಂತಾದವರು ಭಾಗವಹಿಸಿ ಶುಭ ಹಾರೈಸಿದರು.
ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನಿಕಟಪೂರ್ವ ಅಧ್ಯಕ್ಷ ರವಿರಾಜ್ ಗೌಡ ಸ್ವಾಗತಿಸಿದರು.