Posts

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ದಿನಾಂಕ ಪ್ರಕಟ ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಟಿ

1 min read

ಬೆಳ್ತಂಗಡಿ; ಹಲವಾರು ಗೊಂದಲ, ಊಹಾ ಪೂಹಗಳಿಗೆ ಕಾರಣವಾಗಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೊನೆಗೂ ದಿನಾಂಕ ಪ್ರಕಟವಾಗಿದೆ. 

ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು. 

ಜುಲೈ 19 ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ. ಜುಲೈ 22 ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಒಟ್ಟು 

8.76 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಬಾರಿ ಹೆಚ್ಚುವರಿ ಕೇಂದ್ರಗಳು‌ ಸೇರಿದಂತೆ ಒಟ್ಟಿ 73066 ಸ್ಥಾಪನೆ ಮಾಡಲು ಉದ್ದೇಶಿಸಲಾಗಿದೆ. ಪರೀಕ್ಷೆಗೆ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೇರಿ‌ ಹಿರಿಯ ಅಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ‌ ಚರ್ಚಿಸಲಾಗಿದೆ. ಕಳೆದ ಬಾರಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಈ ಬಾರಿ ವಿಶೇಷ ಪರಿಸ್ಥಿತಿ ಮಧ್ಯೆ ಪರೀಕ್ಷೆ ನಡೆಸಲಾಗುತ್ತಿದೆ ಎಂದರು. ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡಬೇಕಿದೆ. ಆರೋಗ್ಯ ಇಲಾಖೆಯ ಆಧಿಕಾರಿಗಳ ಸಲಹೆ ಪಡೆಯಲಾಗಿದೆ.‌ ವಿದ್ಯಾರ್ಥಿಗಳು ಪರೀಕ್ಷೆಗೆ ಸಕಲ‌ ಸಿದ್ದತೆ ಮಾಡಿಕೊಂಡಿದ್ದಾರೆ. ಸಮಾಜವಿಜ್ಞಾನ, ವಿಜ್ಞಾನ ಹಾಗೂ ಗಣಿತದ ಒಂದು ಪತ್ರಿಕೆ ಹಾಗೂ ಕನ್ನಡ ಹಿಂದಿ‌‌ ಇಂಗ್ಲೀಷ್ ಸೇರಿ‌ ಒಂದು ಪರೀಕ್ಷೆ ನಡೆಯಲಿದೆ ಎಂದು ಸಚಿವರು ವಿವರ ನೀಡಿದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

You may like these posts

Post a Comment