Posts

ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು ಯುವಕಾಂಗ್ರೆಸ್ ಮುಖಂಡ ಅಭಿನಂದನ್ ಹರೀಶ್‌ ಕುಮಾರ್‌ಗೆ ಗಾಯ

0 min read


ಬೆಳ್ತಂಗಡಿ : ಯುವ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ, ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಅವರು ಚಲಾಯಿಸುತ್ತಿದ್ದ ಪಜಿರೋ ಕಾರು ಬೆಳ್ತಂಗಡಿ ತಾಲೂಕಿನ ಕುತ್ರೊಟ್ಟು ಬಳಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಈ ವೇಳೆ ಅಭಿನಂದನ್ ಅವರಿಗೆ ಮೂಗು ಮತ್ತು ತಲೆಗೆ ಹೆಚ್ಚಿನ ಗಾಯವಾಗಿದೆ ಎಂದು ಆರಂಭಿಕ ಮಾಹಿತಿ ಲಭಿಸಿದೆ.

ವಿಷಯ ತಿಳಿದ ತಕ್ಷಣ ಸ್ಥಳೀಯ ನಿವಾಸಿ ಸಂತೋಷ್ ಹೊಳ್ಳ  ಅವರು ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ ಅವರಿಗೆ ಮಾಹಿತಿ ನೀಡಿದ್ದು, ತಕ್ಷಣ ಆಗಮಿಸಿದ ಅವರು ಮತ್ತು ಸಂಗಡಿಗರಾದ  ಇಂಟಕ್ ಅಧ್ಯಕ್ಷ ನವೀನ್ ಗೌಡ , ರಾಜೇಶ್ ಭಟ್ , ಧನುಷ್ ಸೇರಿ ಅಭಿನಂದನ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆಂದು ಗೊತ್ತಾಗಿದೆ.ಅದೃಷ್ಟವಶಾತ್ ಹೆಚ್ಚಿನ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment