Posts

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವೇಕ್ಸಿನೇಷನ್ ಗೆ ಉಸ್ತುವಾರಿ ಸಚಿವರಿಂದ ಚಾಲನೆ

0 min read

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಕೋವಿಡ್ ವೇಕ್ಸಿನೇಷನ್ ವ್ಯವಸ್ಥೆ ಯನ್ನು ಕ್ಯಾಂಪಸ್ ನಲ್ಲೇ ಮಾಡಿದ್ದು ಇದರ ಉದ್ಘಾಟನೆಯನ್ನು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿದರು.

ತಾಲೂಕಿನ ಎಸ್‌ಡಿಎಂ ಕಾಲೇಜು,‌ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜು, ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ನಾರಾವಿ ಕಾಲೇಜು ಗಳಲ್ಲಿ ವೇಕ್ಸಿನೇಷನ್ ಗೆ ವ್ಯವಸ್ಥೆ ಮಾಡಿದ ಶಾಸಕ ಹರೀಶ್ ಪೂಂಜ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಈ ಸಮಾರಂಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ತಹಶಿಲ್ದಾರ್ ಮಹೇಶ್ ಜೆ, ತಾ. ಆರೋಗ್ಯಾಧಿಕಾರಿ ಡಾ. ಕಲಾಮಧು, ಕಾಲೇಜು ಪ್ರಾಂಶುಪಾಲ ಡಾ. ಆಂಟೊನಿ ಮೊದಲಾದವರು ಉಪಸ್ಥಿತರಿದ್ದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment