ಬೆಳ್ತಂಗಡಿ; ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಕೋವಿಡ್ ವೇಕ್ಸಿನೇಷನ್ ಕಾರ್ಯಕ್ರಮವು ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರೂ ಆಗಿರುವ ಮಾಜಿ ಶಾಸಕ ವಸಂತ ಬಂಗೇರ ಉದ್ಘಾಟನೆ ನೆರವೇರಿಸಿದರು.
ತಾಲೂಕು ಸಮುದಾಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ವಿದ್ಯಾವತಿ, ಕಾಲೇಜಿನ ನೋಡೆಲ್ ಅಧಿಕಾರಿ ಶಮೀವುಲ್ಲಾ, ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳಾದ ಸಂತೋಷ್, ಭವ್ಯಶ್ರೀ ಮೊದಲಾದವರು ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಚಾರ್ಯ ಡಾ.ಪ್ರವೀಣ್ ಸ್ವಾಗತಿಸಿದರು. ಪ.ಪೂ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಧನ್ಯವಾದವಿತ್ತರು.