Posts

ಬುಲ್ ಬುಲ್ ಗೋಲ್ಡನ್ ಆ್ಯರೋ ಪರೀಕ್ಷೆ; ಬೆಳ್ತಂಗಡಿ ಎಸ್‌ಡಿಎಂ ಶಾಲೆಗೆ ರಾಷ್ಟ್ರಪ್ರಶಸ್ತಿ

0 min read


ಬೆಳ್ತಂಗಡಿ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ 4 ಬುಲ್ ಬುಲ್ ವಿದ್ಯಾರ್ಥಿಗಳು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸಂಸ್ಥೆ ನವದೆಹಲಿ ಇವರು ಆಯೋಜಿಸಿದ ಗೋಲ್ಡನ್ ಆ್ಯರೋ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ರಾಷ್ಟ್ರೀಯ ಪುರಸ್ಕಾರವನ್ನು ಪಡೆದಿರುತ್ತಾರೆ. ಇವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ,  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಸ್ಕೌಟ್ ಗೈಡ್  ಕ್ಯಾಪ್ಟನ್ ಪ್ರಮೀಳಾ ಇವರು ತರಬೇತಿ ನೀಡಿರುತ್ತಾರೆ .ಶಾಲೆಯ ಮುಖ್ಯ ಶಿಕ್ಷಕಿ ಹೇಮಲತಾ  ಎಂ. ಆರ್ ಮತ್ತು ಶಿಕ್ಷಕವೃಂದದವರು ಸಂಪೂರ್ಣ ಸಹಕಾರ ನೀಡಿರುತ್ತಾರೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment