Posts

ದ.ಕ.ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ; ಜಿಲ್ಲಾಧಿಕಾರಿ

1 min read

ಬೆಳ್ತಂಗಡಿ:.ದ.ಕ ಜಿಲ್ಲೆಯಲ್ಲಿ ಸೋಮವಾರದಿಂದ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದ್ದು, ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ಸಾಮಗ್ರಿಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಜೂನ್ 28ರವರೆಗೆ ಅಥವಾ ಜುಲೈ 5ರವರೆಗೆ ಲಾಕ್‌ಡೌನ್ ಸಡಿಲಿಕೆ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಪರಿಸ್ಥಿತಿಯನ್ನು ಅವಲೋಕಿಸಿ ಆ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಡಿಸಿ ಸ್ಪಷ್ಪಪಡಿಸಿದ್ದಾರೆ.

ಜಿಲ್ಲೆಯಾದ್ಯಂತ ಅನ್ ಲಾಕ್ 1.0 ಭಾಗವಾಗಿ ಅಗತ್ಯವಸ್ತು ಖರೀದಿ ಅವಧಿ ವಿಸ್ತರಣೆ ಮಾಡಿದ್ದು, ಜಿಲ್ಲೆಯಾದ್ಯಂತ ರಾತ್ರಿ.7ರಿಂದ ಬೆಳಿಗ್ಗೆ 7ರವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ.

ವಾರಾಂತ್ಯದ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ  7ರವರೆಗೆ ವೀಕೆಂಡ್ ಕರ್ಪ್ಯೂ ಜಾರಿ ಇರುತ್ತದೆ.

ನಾಳೆಯಿಂದ ಜಿಲ್ಲೆಯಲ್ಲಿ ಏನಿದೆ? ಏನಿರಲ್ಲ?

ಆಹಾರ, ದಿನಸಿ, ಹಣ್ಣು-ತರಕಾರಿ, ಮೀನು-ಮಾಂಸ, ಬೀದಿಬದಿ ವ್ಯಾಪಾರ ಮತ್ತು ಮದ್ಯ ಪಾರ್ಸೆಲ್ ಗಷ್ಟೇ ಮಧ್ಯಾಹ್ನ 1ರವರೆಗೆ ಅವಕಾಶ ಇದೆ.

ಜಿಲ್ಲೆಯಲ್ಲಿ ಪಾರ್ಕ್ ಮತ್ತು ಸಾರ್ವಜನಿಕ ಉದ್ಯಾನ ತೆರೆಯಲು ಅವಕಾಶ ಇಲ್ಲ.

ನಿರ್ಮಾಣ ಚಟುವಟಿಕೆ ಮತ್ತು ಸ್ಟೀಲ್, ಸಿಮೆಂಟ್ ಅಂಗಡಿಗಳಿಗೆ ಅನುಮತಿ ನೀಡಲಾಗಿದೆ.

ಅಟೋ ರಿಕ್ಷಾ ಮತ್ತು ಟ್ಯಾಕ್ಸಿ ಇಬ್ಬರು ಪ್ರಯಾಣಿಕರ ಸಹಿತ ಸಂಚರಿಸಬಹುದು.

ಕೆಎಸ್ಆರ್ ಟಿಸಿ ಬಸ್ಸು ಜಿಲ್ಲೆಯಿಂದ ಹೊರಗೆ ಹಾಗೂ ಒಳಗೆ ಓಡಾಟವಿಲ್ಲ

ಹೊರ ಜಿಲ್ಲೆಯಿಂದಲೂ ಕೆಎಸ್ ಆರ್ ಟಿಸಿ ಬಸ್ಸು ಓಡಾಟಕ್ಕೆ ನಿರ್ಭಂಧ ವಿಧಿಸಲಾಗಿದೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

You may like these posts

1 comment

  1. second ago
    it's good