Posts

ದ್ವಿತೀಯ ಪಿ.ಯು ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್ ಗೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ

0 min read


ಬೆಳ್ತಂಗಡಿ: ಕೊರೊನಾ ಕಾರಣಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಪಾಸ್ ಮಾಡಲು ಮುಂದಾಗಿದ್ದ ರಾಜ್ಯ ಸರಕಾರದ ಕ್ರಮದ ವಿರುದ್ಧ ಗರಂ ಆಗಿರುವ ಹೈಕೋರ್ಟ್, ತಾರತಮ್ಯವೆಸಗದೆ ಸ್ಪಷ್ಟ ನೀತಿ ಅನುಸರಿಸಿ ಎಂದು ಹೇಳಿದೆ. ದ್ವಿತೀಯ ದ್ವಿತೀಯ ಪಿಯು ಫಲಿತಾಂಶಕ್ಕೆ ತಾತ್ಕಾಲಿಕ ತಡೆಯನ್ನೂ ನೀಡಿದೆ.

ಸಾಮಾನ್ಯ ವಿದ್ಯಾರ್ಥಿಗಳಿಗೂ ಹಾಗೂ ರಿಪೀಟರ್ಸ್ ಗಳಿಗೂ ತಾರತಮ್ಯವೆಸಗಲಾಗುತ್ತಿದೆ. ರಿಪೀಟರ್ಸ್ ಗೂ ಪರೀಕ್ಷೆ ಇಲ್ಲದೇ ಪಾಸ್ ಮಾಡುವಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ಆದೇಶ ಹೊರಡಿಸಿದೆ. ‌

ರೆಗ್ಯೂಲರ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಿ, ರಿಪೀಟರ್ಸ್ ಗೆ ಮಾತ್ರ ಪರೀಕ್ಷೆ ನಡೆಸುತ್ತಿರುವುದು ಸರಿಯಲ್ಲ. ಪಾಸ್ ಮಾಡುವುದಾದರೆ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡಬೇಕು. ತಾರತಮ್ಯ ಮಾಡುತ್ತಿರುವ ಉದ್ದೇಶವೇನು ಎಂಬ ಬಗ್ಗೆ ಎಜಿಗೆ ಮಾಹಿತಿ ನೀಡಿ, ಗುರುವಾರದೊಳಗೆ ನ್ಯಾಯಾಲಯಕ್ಕೆ ವಿವರಿಸುವಂತೆ ಕೋರ್ಟ್ ಆದೇಶ ನೀಡಿದೆ. ನ್ಯಾಯಾಲಯದ ಈ‌ ತೀರ್ಪಿನಿಂದ‌ ಸರಕಾರಕ್ಕೆ ಹಿನ್ನಡೆಯಾಗಿದೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

You may like these posts

Post a Comment