ಬೆಳ್ತಂಗಡಿ; ರೋಟರಿ ಕ್ಲಬ್ ಬೆಳ್ತಂಗಡಿ ಇದರ 2021 -22 ನೇ ಸಾಲಿನ ನೂತನ ಅಧ್ಯಕ್ಷ , ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಗುರುವಾರ ಸರಳ ರೀತಿಯಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ ,ನೂತನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಹಾಗೂ ನೂತನ ನಿರ್ದೇಶಕ ಮಂಡಳಿಗೆ ರೋಟರಿ ಜಿಲ್ಲಾ 3181 ನಿಯೋಜಿತ ಗವರ್ನರ್ ಪ್ರಕಾಶ್ ಕಾರಂತ್ ಇವರು ಪದಪ್ರಧಾನ ಮಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಲಯ ನಾಲ್ಕರ ಸಹಾಯಕ ಗವರ್ನರ್ ಸುರೇಂದ್ರ ಕಿಣಿ ,ನಿಕಟಪೂರ್ವ ಸಹಾಯಕ ಗವರ್ನರ್ ಪ್ರತಾಪ್ ಸಿಂಹ ನಾಯಕ್ ಭಾಗವಹಿಸಿದ್ದರು.
ನಿರ್ಗಮನ ಅಧ್ಯಕ್ಷ ಧನಂಜಯ ರಾವ್ ಸ್ವಾಗತಿಸಿ, ಸುವರ್ಣ ಮಹೋತ್ಸವ ವರ್ಷದಲ್ಲಿ ಸಹಕರಿಸಿದ ಎಲ್ಲರಿಗೂ ವಂದಿಸಿದರು. ನಿರ್ಗಮನ ಕಾರ್ಯದರ್ಶಿ ಶ್ರೀಧರ್ ಕೆ ವಿ ಇವರು ಕಳೆದ ಸಾಲಿನ ಕಾರ್ಯಕ್ರಮಗಳ ವರದಿ ವಾಚಿಸಿದರು. ನೂತನ ಅಧ್ಯಕ್ಷರಾಗಿ ಪದಸ್ವೀಕಾರ ಮಾಡಿದ ಶರತ್ ಕೃಷ್ಣ ಪಡ್ವೆಟ್ನಾಯ, ಮುಂದಿನ ವರ್ಷ ರೋಟರಿ ಕ್ಲಬ್ ಬೆಳ್ತಂಗಡಿ ಯನ್ನು ಮುನ್ನಡೆಸಲು ಎಲ್ಲರ ಸಹಕಾರ ಕೋರಿದರು. ಮುಖ್ಯ ಅತಿಥಿಗಳು ನಿರ್ಗಮನ ತಂಡಕ್ಕೆ ಹಾಗೂ ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು. ನೂತನ ಕಾರ್ಯದರ್ಶಿ ಅಬೂಬಕ್ಕರ್ ಧನ್ಯವಾದ ಸಮರ್ಪಿಸಿದರು. ಜಯಕುಮಾರ್ ಶೆಟ್ಟಿ ಹಾಗೂ ಮನೋರಮಾ ಭಟ್ ಕಾರ್ಯಕ್ರಮ ನಿರ್ವಹಿಸಿದರು.