Posts

ಜಾಗದ ಕನ್ವರ್ಷನ್ ನ್ಯಾಯಾಲಯದ ತೀರ್ಪು‌ ಜಾರಿಗೊಳಿಸುವಂತೆ ನಿರ್ದೇಶನ ನೀಡಲು ಹರೀಶ್ ಪೂಂಜರಿಂದ ಸಿ.ಎಂ ಗೆ ಮನವಿ


ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಭೂಮಿ ಕನ್ವರ್ಷನ್ ಗೆ  11ಇ ನಕ್ಷೆ ಕಡ್ಡಾಯವಲ್ಲ ಎಂಬುದಾಗಿ‌ ನ್ಯಾಯಾಲಯ ನೀಡಿರುವ ತೀರ್ಪಿನ ನಿರ್ಧಾರವನ್ನು ಶೀಘ್ರದಲ್ಲೇ ಜಾರಿಗೆ ತರುವಂತೆ ಸಂಬಂಧಿಸಿದ ಇಲಾಖೆಗೆ ನಿರ್ದೇಶಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಅವರು ಸಿ.ಎಂ ಯಡಿಯೂರಪ್ಪ ಅವರಿಗೆ ಜನತೆಯ ಪರವಾಗಿ ಮನವಿ ಸಲ್ಲಿಸಿದ್ದಾರೆ.

ಭೂ ಪರಿವರ್ತನೆ ಗೆ 11 ಇ ನಕ್ಷೆಗಾಗಿ  ಮತ್ತು ವಿವಿಧ ಸ್ಥಳೀಯ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರವನ್ನು ಹಾಜರು ಪಡಿಸುವುದು ಕಡ್ಡಾಯವೆಂಬ ನಿಯಮವು ಈಗ ಚಾಲ್ತಿಯಲ್ಲಿದ್ದು ಈ ನಿಯಮಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂ ಪರಿವರ್ತನೆಗೆ ಬಯಸಿದ್ದ ಆನೇಕ ಸಾರ್ವಜನಿಕರಿಗೆ  ತೊಂದರೆಯುಂಟಾಗುತ್ತಿದೆ.

ಈ ನಿಟ್ಟಿನಲ್ಲಿ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ನವೀನ್ ಕುಂದರ್ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ಬಳಿಕ‌‌ ಮಾನ್ಯ ಹೈಕೋರ್ಟ್ ನೀಡಿದ ತೀರ್ಪಿನಂತೆ ಜಿಲ್ಲೆಯಲ್ಲಿ

ಪ್ರಸ್ತುತ ಚಾಲ್ತಿಯಲ್ಲಿರುವ ಕೃಷಿ ಭೂಮಿಯನ್ನು ಭೂ ಪರಿವರ್ತನೆ ಗೊಳಿಸಬೇಕಾದರೆ 11ಇ ನಕ್ಷೆ ಮತ್ತು ವಿವಿಧ ಸ್ಥಳೀಯ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರವನ್ನು ಹಾಜರು ಪಡಿಸುವುದು ಕಡ್ಡಾಯವೆಂಬ ನಿಯಮದಿಂದ ವಿನಾಯಿತಿ ಲಭಿಸಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯವರಿಗೆ ನ್ಯಾಯಾಲಯದ ಆದೇಶವನ್ನು ತುರ್ತಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲು ಸೂಚಿಸುವಂತೆ‌ ಅವರು ಸಿ.ಎಂ ಅವರನ್ನು ಭಿನ್ನವಿಸಿಕೊಂಡರು.

ಈ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ  ಡಾ| ಭರತ್ ಶೆಟ್ಟಿ ಉಪಸ್ಥಿತರಿದ್ದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment

© Live Media News. All rights reserved. Distributed by Pixabin Official