ಬೆಳ್ತಂಗಡಿ: ಅಗ್ನಿಶಾಮಕ ಮತ್ತು ತುರ್ತು ಸಂದರ್ಭದಲ್ಲಿ ಸಲ್ಲಿಸಿದ ವಿಶೇಷ ಸೇವಾಸಾಧನೆಯನ್ನು ಪರಿಗಣಿಸಿ ಬೆಳ್ತಂಗಡಿ ಅಗ್ನಿಶಾಮಕ ಠಾಣೆಯ ಇಬ್ಬರು ಅಧಿಕಾರಿಗಳಿಗೆ ಮುಖ್ಯಮಂತ್ರಿ ಚಿನ್ನದಪದಕ ಪ್ರಕಟವಾಗಿದೆ.
ಬೆಳ್ತಂಗಡಿ ಅಗ್ನಿಶಾಮಕ ಠಾಣಾಧಿಕಾರಿಯಾಗಿರುವ ಎಂ.ಗೋಪಾಲ್ ಹಾಗೂ ಪ್ರಮುಖ ಅಗ್ನಿಶಾಮಕ ಕೃಷ್ಣ ಪಿ ನಾಯಕ್ ಅವರು ಈ ಪ್ರಶಸ್ತಿಗೆ ಭಾಜನರಾಗಿದವರು.
ಜು.13 ರಂದು ಬೆಂಗಳೂರಿನ ಬಾಂಕ್ವೆಟ್ ಹಾಲ್‌ನಲ್ಲಿ ನಡೆದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹರಕ್ಷಕದಳ ಪೌರ ರಕ್ಷಣೆ ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆ ಅಧಿಕಾರಿ, ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಚಿನ್ನದ ಪದಕ ಪ್ರದಾನ ಸಮಾರಂಭದಲ್ಲಿ ಈ ಇಬ್ಬರೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.