ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಇದರ ನೇತೃತ್ವದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ವಿವಿಧ ಸಂಘಟನೆಗಳ ಆಶ್ರಯದೊಂದಿಗೆ ಕಾರಿತಾಸ್ ಇಂಡಿಯಾ ನವದೆಹಲಿ, ಕ್ಯಾಥೋಲಿಕ್ ನಿಯರ್ ಈಸ್ಟ್ ವೆಲ್ಫೇರ್ ಅಸೋಸಿಯೇಷನ್, ಸ್ನೇಹ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇವರ ಆರ್ಥಿಕ ನೆರವಿನೊಂದಿಗೆ ಜು.14 ರಂದು ಉದ್ಘಾಟನೆಗೊಂಡ ಆಹಾರದ ಕಿಟ್ ವಿತರಣಾ ಕಾರ್ಯಕ್ರಮದ ಮುಂದಿನ ಅಂಗವಾಗಿ ಜು. 16 ರಂದು ಕಿಟ್ ವಿತರಿಸುವ ಕಾರ್ಯಕ್ರಮವನ್ನು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆ ಕಛೇರಿಯಲ್ಲಿ ಹಮ್ಮಿಕೊಳ್ಳಲಾಯಿತು.
ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆಯ ಡಿ ದರ್ಜೆಯ ನೌಕರರು ಹಾಗೂ ಅಂಬುಲೆನ್ಸ್ ಚಾಲಕರ ಸೇವೆಯನ್ನು ನೆನೆಸುತ್ತಾ ಒಟ್ಟು 27 ಸಿಬ್ಬಂದಿಗಳಿಗೆ ಆಹಾರದ ಕಿಟ್ ವಿತರಣೆ ಮಾಡಲಾಯಿತು.
ಬೆಳ್ತಂಗಡಿ ತಾಲೂಕು ಆರೋಗ್ಯ ಅಧಿಕಾರಿ ಡಾ|ಕಲಾಮಧು, ಬಿ.ಹೆಚ್.ಇ.ಒ ಪುಷ್ಪಾ, ತಾಲೂಕು ಶುಶ್ರೂಷಣಾಧಿಕಾರಿ ಜೋಯ್ಸ್ ಡಿಸೋಜಾ ಹಾಗೂ ಶುಶ್ರೂಷಕಿಯರು ಉಪಸ್ಥಿತರಿದ್ದರು.
ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ವಂ.ಫಾ.ಬಿನೋಯಿ ಎ.ಜೆ ಪ್ರಾಸ್ತಾವಿಸಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸಿಸ್ಟರ್ ಸ್ವಾಗತಿಸಿ, ವಂದಿಸಿದರು.