Posts

ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ

1 min read


ಬೆಳ್ತಂಗಡಿ: ತಾಲೂಕು ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸಂಘ, ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ, ಕಾಲಭೈರವೇಶ್ವರ ಒಕ್ಕಲಿಗ ಗೌಡರ ಯುವ ವೇದಿಕೆ ಹಾಗೂ ಮಹಿಳಾ ವೇದಿಕೆಯ ಸಹಭಾಗಿತ್ವದಲ್ಲಿ  ಸಂಘದ ಕಚೇರಿಯಲ್ಲಿ ನಾಡ ಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ, ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸಂಘದ ಉಪಾಧ್ಯಕ್ಷ ಎಂ.ತುಂಗಪ್ಪ ಗೌಡ, ಕೆಂಪೇಗೌಡರ ದೂರದೃಷ್ಟಿ ಮತ್ತು ಆದರ್ಶಗಳ ಯುವ ಸಮುದಾಯಕ್ಕೆ ಮಾದರಿ. ಬೆಂಗಳೂರು ನಗರ ನಿರ್ಮಾಣ ಅವರ ಯೋಜನೆಗಳು ಅದ್ಭುತವಾಗಿದ್ದು ಅವರ ಸಾರ್ವಕಾಲಿಕ ಸ್ಮರಣೀಯ ವ್ಯಕ್ತಿ ಎಂದು ಬಣ್ಣಿಸಿದರು.

ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿ ಅಧ್ಯಕ್ಷ ರಂಜನ್ ಜಿ.ಗೌಡ, ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ಯುವ ವೇದಿಕೆಯ ಅಧ್ಯಕ್ಷ ಸುಧಾಕರ ಗೌಡ, ಮಹಿಳಾ ಘಟಕದ ಅಧ್ಯಕ್ಷೆ ಅಪರ್ಣಾ ಶಿವಕಾಂತ ಗೌಡ, ಸಂಘದ ಪದಾಧಿಕಾರಿಗಳು, ಸಮಾಜದ ಪ್ರಮುಖರು ಹಾಗೂ ಸೌಹಾರ್ದ ಸಹಕಾರಿಯ ಸಿಬಂದಿಗಳು ಉಪಸ್ಥಿತರಿದ್ದರು.

ಸೌಹಾರ್ದ ಸಹಕಾರಿಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಗೌಡ ಕಲ್ಲಾಜೆ ಸ್ವಾಗತಿಸಿ, ಸಂಘದ ಕಾರ್ಯದರ್ಶಿ ಬಾಲಕೃಷ್ಣ ಗೌಡ ವಂದಿಸಿದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment