Posts

ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಂಕರ ದೇವಾಡಿಗರಿಗೆ ಶಾಲೆ, ಸಂಘ ಸಂಸ್ಥೆಗಳಿಂದ ಬೀಳ್ಕೊಡುಗೆ

1 min read

ಬೆಳ್ತಂಗಡಿ: ಶಿಕ್ಷಣ ಇಲಾಖೆಯಲ್ಲಿ ಸುದೀರ್ಘ 36 ವರ್ಷಗಳ ಸೇವೆ ಸಲ್ಲಿಸಿ, ಪ್ರಸ್ತುತ ಸರಕಾರಿ ಹಿ. ಪ್ರಾ ಶಾಲೆ ಹಳೆಪೇಟೆಯಲ್ಲಿ  ಜು. 31 ರಂದು ವಯೋನಿವೃತ್ತರಾದ ದೈಹಿಕ ಶಿಕ್ಷಣ ಶಿಕ್ಷಕ ಕರ್ತವ್ಯದಲ್ಲಿದ್ದ ಶಂಕರ್ ದೇವಾಡಿಗ ಅವರಿಗೆ ಶಾಲೆ, ಗ್ರಾಮ ಪಂಚಾಯತ್, ಶಿಕ್ಷಕರ ಸಂಘ ಹಾಗೂ ಹಳೆವಿದ್ಯಾರ್ಥಿಗಳೂ ಸೇರಿದಂತೆ ಸಂಘ ಸಂಸ್ಥೆಗಳ ವತಿಯಿಂದ ಬೀಳ್ಕೊಡುಗೆ ಸಮಾರಂಭ ಹಳೆಪೇಟೆ ಶಾಲೆಯಲ್ಲಿ ಜರುಗಿತು.

ಸಮಾರಂಭದಲ್ಲಿ ಉಜಿರೆ ಗ್ರಾ.ಪಂ ಅಧ್ಯಕ್ಷೆ ಪುಷ್ಪಾ ಆರ್ ಶೆಟ್ಟಿ, ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಹಿರಿಯ ಸದಸ್ಯ ಬಾಲಕೃಷ್ಣ ಗೌಡ, ಅಕ್ಷರದಾಸೋಹ ಸಹಾಯಕ ನಿರ್ದೇಶಕಿ ತಾರಾಕೇಸರಿ, ಶಿಕ್ಷಣ ಸಂಯೋಜಕ ಸುಭಾಶ್ ಜಾದವ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭುವನೇಶ ಜೆ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಯಶೋಧರ ಸುವರ್ಣ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಸಹಶಿಕ್ಷಕರ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್, ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಮತ್ತು ಅಧ್ಯಾಪಕವೃಂದ,  ಸದ್ರಿ‌ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಹಿಲ್ಡಾ, ಮತ್ತು ಶಿಕ್ಷಕವೃಂದದವರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಎಸ್‌ಡಿಎಂಸಿ ಅಧ್ಯಕ್ಷೆ ನೇತ್ರಾ, ಹಳೆ ವಿದ್ಯಾರ್ಥಿಗಳು ಇವರೆಲ್ಲ ಹಾಜರಿದ್ದು ಶಂಕರ್ ದೇವಾಡಿಗ ಅವರನ್ನು ಪ್ರತ್ಯೇಕ ಪ್ರತ್ಯೇಕವಾಗಿ ಸನ್ಮಾನಿಸಿ ಬೀಳ್ಕೊಟ್ಟರು. 

ಸಮಾರಂಭಲ್ಲಿ ರಾಷ್ಟ್ರ ಮಟ್ಟದ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು, ಉದ್ಯಮಿ ಕೇಶವ ಪೈ ಸಹಿತ ಇತರ ಪ್ರಮುಖರು ಉಪಸ್ಥಿತರಿದ್ದು, ಶಂಕರ್ ದೇವಾಡಿಗ ಅವರ ಸೇವಾ ಅವಧಿಯ ಕರ್ತವ್ಯದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment