Posts

ಆರು ತಿಂಗಳೊಳಗೆ ಉಜಿರೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕ ಆರಂಭ| ಪತ್ರಕರ್ತರ ಜೊತೆ ಸ್ನೇಹಕೂಟದಲ್ಲಿ ವೈದ್ಯಕೀಯ ಅಧೀಕ್ಷಕ ಡಾ. ರಂಜನ್ ರಿಂದ ಮಾಹಿತಿ

ಬೆಳ್ತಂಗಡಿ; ಉಜಿರೆ ಎಸ್ಡಿಎಂ ಆಸ್ಪತ್ರೆಯಲ್ಲಿ ವಿವಿಧ ವಿಭಾಗಗಳು ಯಶಸ್ವಿಯಾಗಿ ಕಾರ್ಯಾಚರಿಸುತ್ತಿದ್ದು, 12 ತಜ್ಞ ವೈದ್ಯರುಗಳು, 12 ಮಂದಿ ವೈದ್ಯರುಗಳು ಸೇವೆ ನೀಡುತ್ತಿದ್ದಾರೆ. ‌ಗ್ರಾಮಾಂತರ ಭಾಗದಲ್ಲಿ ಜನರಿಗೆ ಅನುಕೂಲ ಆಗುವ ಡಯಾಲಿಸಿಸ್ ಘಟಕವನ್ನು ಮುಂದಿನ ಆರು ತಿಂಗಳಲ್ಲಿ ಆರಂಭಿಸುವ ಬಗ್ಗೆ ನಮ್ಮ ಸಂಸ್ಥೆಯ ಮುಖ್ಯಸ್ಥರಾದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಪ್ರಕ್ರೀಯೆಗೆ ಚಾಲನೆ ನೀಡಿದ್ದಾರೆ ಎಂದು ವೈದ್ಯಕೀಯ ಅಧೀಕ್ಷಕ ಡಾ ರಂಜನ್ ಅವರು ತಿಳಿಸಿದರು.




ಆಗಸ್ಟ್ 6 ರಂದು ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಕರ್ತರ ಹೊತೆಗೆ ಹಮ್ಮಿಕೊಂಡಿದ್ದ 

ಸ್ನೇಹ ಕೂಟದಲ್ಲಿ ಅವರು ಮಾತನಾಡಿದರು.

ಆಸ್ಪತ್ರೆಯಲ್ಲಿ ಇರುವ ವಿವಿಧ ಸೌಲಭ್ಯಗಳ ಬಗ್ಗೆ ಆಸ್ಪತ್ರೆಯ ಆಡಳಿತ ನಿರ್ದೇಶಕ‌ ಜನಾರ್ದನ್ ಅವರು ವಿವರಿಸಿದರು.

ಪಿಝಿಶಿಯನ್ ಡಾ.‌ಸಾತ್ವಿಕ್ ಜೈನ್ ಉಪಸ್ಥಿತರಿದ್ದರು. ವೇದಿಕೆಯಲ್ಲಿದ್ದ ಬೆಳ್ತಂಗಡಿ ತಾಲೂಕಿನ ಪತ್ರಕರ್ತರ ಸಂಘದ ಅಧ್ಯಕ್ಷ ಅಚುಶ್ರೀ ಬಾಂಗೇರು, ಕಾರ್ಯದರ್ಶಿ ಜಾರಪ್ಪ ಪೂಜಾರಿ ಅವರನ್ನು ಆಸ್ಪತ್ರೆ ಕಡೆಯಿಂದ ಗೌರವಿಸಲಾಯಿತು. ಪಿಆರ್‌ಒ ಸಂಗೀತಾ ಭಾಗವತ್ ನಿರೂಪಿಸಿದರು. ಮಾರ್ಕೆಟಿಂಗ್ ಕನ್ಸಲ್ಟೆಂಟ್ ಉಮೇಶ್ ಗೌಡ ಉಪಸ್ಥಿತರಿದ್ದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment

© Live Media News. All rights reserved. Distributed by Pixabin Official