ಬೆಳ್ತಂಗಡಿ : ಅತ್ಯಂತ ಸರಳ ರೀತಿಯಲ್ಲಿ ನಡೆದಿದ್ದ ಈ ವರ್ಷದ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ ಎಂದು ಇಲಾಖೆ ತಿಳಿಸಿದೆ.
ಸೋಮವಾರ ಸಂಜೆ 3.30 ಕ್ಕೆ ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬೆಂಗಳೂರಿನಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ ಎಂದು ತಿಳಿಸಲಾಗಿದೆ.
99.65% ಹಾಜರಾತಿ:
ಈ ಬಾರಿಯ ಪರೀಕ್ಷೆಗೆ ಶೇಕಡಾ 99.65 % ವಿದ್ಯಾರ್ಥಿಗಳ ಹಾಜರಾಗಿದ್ದರು.
8 ಲಕ್ಷದ 49 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು . ಕೊರೋನಾ ಸೋಂಕು ಆತಂಕದ ನಡುವೆಯೂ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗಿತ್ತು.