Posts

ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅಭಿವೃದ್ಧಿ ವಿಚಾರದಲ್ಲಿ ನಿರ್ಲಕ್ಷ್ಯ; ಡಿಸಿ ಗೆ ಆಯೋಗದಿಂದ ನೋಟೀಸು

1 min read


ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಅಭಿವೃದ್ಧಿ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಮನವಿಗೆ ಸ್ಪಂದಿಸಿದ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ದ.ಕ ಜಿಲ್ಲಾಧಿಕಾರಿ ಅವರಿಗೆ ನೋಟಿಸ್ ನೀಡಿದೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬೆಳ್ತಂಗಡಿ ತಾಲೂಕಿನ 9 ಗ್ರಾಮಗಳು ಒಳಪಡುತ್ತವೆ. ಬೆಳ್ತಂಗಡಿ ತಾಲೂಕಿನ ನಾರಾವಿ , ಕುತ್ಲೂರು , ಸುಲ್ಕೇರಿಮೊಗ್ರು , ಶಿರ್ಲಾಲು , ಸವಣಾಲು , ನಡ , ನಾವೂರು , ಮಲವಂತಿಗೆ , ಮಿತ್ತಬಾಗಿಲು ಗ್ರಾಮಗಳು ಒಳಪಟ್ಟಿದೆ. ಈ ಗ್ರಾಮಗಳ ದಟ್ಟ ಕಾನನದ ನಡುವೆ ಆದಿವಾಸಿ ಜನಾಂಗದ ಮಲೆಕುಡಿಯ ಸಮುದಾಯಗಳು ಒಂದುವರೆ ಶತಮಾನಗಳಿಂದ ವಾಸಿಸುತ್ತಿದ್ದಾರೆ. ಆದರೆ ಇಂದಿಗೂ ರಸ್ತೆ , ವಿದ್ಯುತ್ ಸೇರಿದಂತೆ ಸಂವಿಧಾನದತ್ತವಾದ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. 

ಅರಣ್ಯ ಪ್ರದೇಶದಲ್ಲಿ ವಾಸಿಸುವ ಆದಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅರಣ್ಯ ಹಕ್ಕು ಕಾಯಿದೆ 2006 ಜಾರಿಯಾಗಿ 15 ವರ್ಷಗಳಾದರೂ ಅಧಿಕಾರಿಗಳ ಬೇಜವ್ದಾರಿಯಿಂದ ಅನುಷ್ಠಾನಗೊಂಡಿಲ್ಲ ಎಂದು ಆರೋಪಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಬೆಳ್ತಂಗಡಿ ತಾಲೂಕು ಸಮಿತಿ, ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಕಳೆದ ವರ್ಷ ಆಗಸ್ಟ್ 3 ರಂದು ದೂರು ನೀಡಿದ್ದರು. ದೂರನ್ನು ಸ್ವೀಕರಿಸಿದ ಆಯೋಗ ದ.ಕ ಜಿಲ್ಲಾಧಿಕಾರಿರವರಿಗೆ ದಿನಾಂಕ 5-11-2020 ಹಾಗೂ 24-2-2021 ರಂದು ಸ್ಪಷ್ಟನೆ ನೀಡುವಂತೆ ಪತ್ರ ಬರೆದಿದ್ದರು. ಆದರೆ ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡದೆ ನಿರ್ಲಕ್ಷಿಸಿರುವುದರಿಂದ ಗರಂ ಆಗಿದ್ದು , ಏಕೆ ನಿಮ್ಮ ಮೇಲೆ ಕ್ರಮ ಕೈಗೊಳ್ಳಬಾರದು ಎಂದು ಆಯೋಗದ ಅಧಿಕಾರಿ ದೀಪಿಕಾ ಖನ್ನಾ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆಯ ಅಂತಿಮ ನೋಟಿಸ್ ನೀಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ 9 ಗ್ರಾಮಗಳ ಪೈಕಿ ಸವಣಾಲು ಗ್ರಾಮದ ಕೇವಲ 9 ಮನೆಗಳಿಗೆ ಮಾತ್ರ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ನಾವೂರು ಗ್ರಾಮದ ಪುಲಿತ್ತಡಿ , ಎರ್ಲೆಲೆ ಪ್ರದೇಶದ ಕೆಲವೊಂದು ಮನೆಗಳಿಗೆ ಸೌಭಾಗ್ಯ ವಿದ್ಯುತ್ ಯೋಜನೆಯಡಿ ಮೀಟರ್ ಬೋರ್ಡ್ ಅಳವಡಿಸಿ 4 ವರ್ಷಗಳಾದರೂ ಇಂದಿಗೂ ವಿದ್ಯುತ್ ಸಂಪರ್ಕ ಕಲ್ಪಿಸಿರುವುದಿಲ್ಲ. ಇನ್ನುಳಿದಂತೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಯಾವುದೇ ಪ್ರದೇಶಗಳಲ್ಲಿ ರಸ್ತೆ, ವಿದ್ಯುತ್ ಸಂಪರ್ಕ ಇರುವುದಿಲ್ಲ ಎಂಬುದು ಗಮನಾರ್ಹ ಸಂಗತಿ. ದೇಶವು ಆಗಸ್ಟ್ 15 ರಂದು 75 ರ ಸ್ವಾತಂತ್ರ್ಯ ಸಂಭ್ರಮದಲ್ಲಿದ್ದರೂ ಆದಿವಾಸಿ ಸಮುದಾಯ ಮೂಲಭೂತ ಸೌಕರ್ಯಗಳಿಂದ ವಂಚಿತಗೊಂಡಿರುವುದು ದುರಂತವೇ ಸರಿ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment