Posts

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ನಿಂದ ರಿವ್ಯೂ ಸಾಂಘಿಕ ತರಬೇತಿ

1 min read


ಬೆಳ್ತಂಗಡಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ರಿ.) ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಇದರ  ರಿವ್ಯೂ ಸಾಂಘಿಕ ಸಭೆಯು ಇಂದು ಸಂಜೆ 4.00ಗಂಟೆಗೆ ಡಿವಿಷನ್ ಅಧ್ಯಕ್ಷ ಹಾರಿಸ್ ಕುಕ್ಕುಡಿ ನೇತೃತ್ವದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜು ಹಾಲ್‌ನಲ್ಲಿ ನಡೆಯಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್ಸೆಸ್ಸೆಫ್ ದ.ಕ ಜಿಲ್ಲೆ ಈಸ್ಟ್ ಕ್ಯಾಂಪಸ್ ಕಾರ್ಯದರ್ಶಿ ರಶೀದ್ ಮಡಂತ್ಯಾರು ನೆರವೇರಿಸಿದರು. 


ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್  ಪ್ರ.ಕಾರ್ಯದರ್ಶಿ ತೌಫೀಕ್ ವೇಣೂರು ವರದಿಯನ್ನು ಹಾಗೂ ಕೋಶಾಧಿಕಾರಿ ಝಮೀರ್ ಸ‌ಅದಿ,ಲಾಯಿಲ ಲೆಕ್ಕಪತ್ರವನ್ನು ಮಂಡಿಸಿದರು.

ಎಸ್ಸೆಸ್ಸೆಫ್ ದ.ಕ ಜಿಲ್ಲೆ ಈಸ್ಟ್ ಸದಸ್ಯ, ಬೆಳ್ತಂಗಡಿ ಡಿವಿಷನ್ ಉಸ್ತುವಾರಿ ಮಸ್‌ಊದ್ ಸ‌ಅದಿ ತರಗತಿಯನ್ನು ಮಂಡಿಸಿದರು.

ಈ ಕಾರ್ಯಕ್ರಮದಲ್ಲಿ ತರ್ತೀಲ್ ಹೋಲಿ ಕುರ್‌ಆನ್ ಕಾರ್ಯಕ್ರಮದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸದಸ್ಯ, ದ.ಕ ಜಿಲ್ಲೆ ಈಸ್ಟ್ ಕೋಶಾಧಿಕಾರಿ ಎಂ.ಶರೀಫ್ ಬೆರ್ಕಳ, ಜಿಲ್ಲಾ ಸದಸ್ಯ ಇಕ್ಬಾಲ್ ಮಾಚಾರು,ಶರೀಫ್ ನಾವೂರು, ರಶೀದ್ ಮದನಿ  ಹಾಗೂ ಬೆಳ್ತಂಗಡಿ ಡಿವಿಷನ್  ಸಮಿತಿ ಸದಸ್ಯರುಗಳು ಹಾಗೂ ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್  ವ್ಯಾಪ್ತಿಯ ಎಲ್ಲಾ ಸೆಕ್ಟರ್ ಪದಾಧಿಕಾರಿಗಳು ಹಾಗೂ ಕೌನ್ಸಿಲರ್‌ಗಳು ಉಪಸ್ಥಿತರಿದ್ದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment