Posts

ಕುತ್ಲೂರಿನ ಸುಂದರಿ ಮಾಹಿತಿ ನೀಡಿದರೆ 10 ಲಕ್ಷ ರೂ. ಬಹುಮಾನ:: ಇಬ್ಬರು ಶಂಕಿತ ನಕ್ಸಲರ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ

ಬೆಳ್ತಂಗಡಿ: ರಾಷ್ಟ್ರೀಯ ತನಿಖಾ ಸಂಸ್ಥೆಯ ಪ್ರಕರಣಗಳ ವಿಚಾರಣೆಯ ಕುರಿತು ವಿಶೇಷ ನ್ಯಾಯಾಲಯವು ಇಬ್ಬರು ನಕ್ಸಲ್‌ವಾದಿಗಳ ವಿರುದ್ಧ ಬಂಧನ ವಾರೆಂಟ್ ಜಾರಿಗೊಳಿಸಿ ಅದೇಶ ಹೊರಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಕೊಟ್ಯಂತಡ್ಕ ಮನೆಯ ಸುಂದರಿ ಆಲಿಯಾಸ್ ಗೀತಾ ಆಲಿಯಾಸ್ ಸಿಂಧು ಮತ್ತು ರಾಯಚೂರು ಜಿಲ್ಲೆಯ ಅರೋಲಿ ಗ್ರಾಮ ಕುಡುಡಿ ಮುಖ್ಯ ರಸ್ತೆಯ ಹನುಮವ್ವನ ದೂತರ ಮಠದ ಎದುರಿನ ಅಂಬೇಡ್ಕರ್ ಕಾಲನಿಯ ಮಹೇಶ್ ಆಲಿಯಾಸ್ ಜಯಣ್ಣ ಆಲಿಯಾಸ್ ಜಾನ್ ಆಲಿಯಾಸ್ ಮಾರಪ್ಪ ತಲೆ ಮರೆಸಿಕೊಂಡಿರುವ ಆರೋಪಿತರು.

ಪಶ್ಚಿಮಘಟ್ಟದಲ್ಲಿ ತಲೆಎತ್ತಿರುವ ನಕ್ಸಲ್ ಚಳುವಳಿಯಲ್ಲಿ ಇವರು ಸಕ್ರಿಯರಾಗಿದ್ದರು ಎಂದು ತಿಳಿದುಬಂದಿದೆ. ಕರ್ನಾಟಕ ಪೊಲೀಸರು ಈ ಹಿಂದೆ ಇವರ ಪತ್ತೆಯ ಮಾಹಿತಿದಾರರಿಗೆ ಬಹುಮಾನ ಘೋಷಿಸಿತ್ತು. ಇದೀಗ ರಾಷ್ಟ್ರೀಯ ತನಿಖಾ ಸಂಸ್ಥೆಯು ಆರೋಪಿತರ ಪತ್ತೆಗಾಗಿ ಸಾರ್ವಜನಿಕ ತಿಳುವಳಿಕೆಯ ಕರಪತ್ರವನ್ನು ಹೊರತಂದಿದೆ. ಅಲ್ಲದೆ ಇಬ್ಬರ ಸುಳಿವು ನೀಡಿದವರಿಗೆ ತಲಾ ರೂ. 10 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment

© Live Media News. All rights reserved. Distributed by Pixabin Official