Posts

ಗುರುವಾಯನಕೆರೆ ದ್ವಿವಾರ್ಷಿಕ ಉರೂಸ್ ಫೆ. 11 ರಿಂದ 19 ರ ವರೆಗೆ

0 min read


ಬೆಳ್ತಂಗಡಿ; ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾಶರೀಫ್ ಮತ್ತು ಜುಮ್ಮಾ ಮಸ್ಜಿದ್ ಇಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಔಲಿಯಾಗಳ ಹೆಸರಿನಲ್ಲಿ  ಪ್ರತೀ ಎರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮದ ಮುಂದಿನ ಸರಣಿಯ ಕಾರ್ಯಕ್ರಮವು 2022 ನೇ ಫೆಬ್ರವರಿ 11 ರಿಂದ ಆರಂಭಗೊಂಡು ಫೆ. 19 ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.



ದ.ಕ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಶೈಖುನಾ ಕೂರತ್ ತಂಙಳ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಸಹಾಯಕ ಖಾಝಿ ಸಯ್ಯಿದ್ ಸಾದಾತ್ ತಂಙಳ್ ನೇತೃತ್ವ ನೀಡಲಿದ್ದಾರೆ. ವಿವಿಧ ದಿನಗಳಲ್ಲಿ ಧಾರ್ಮಿಕ ಉಪನ್ಯಾಸ, ಸಾಮಾಜಿಕ ಕಾರ್ಯಕ್ರಮ, ಅನ್ನದಾನ ಇತ್ಯಾದಿ ಯೋಜನೆಗಳನ್ನು ಸಂಘಟಿಸಲು ತೀರ್ಮಾನಿಸಲಾಗಿದೆ ಎಂದು ಉರೂಸ್ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment