ಬೆಳ್ತಂಗಡಿ; MRPL ನ CSR ಅನುದಾನದಲ್ಲಿ ತಾಲೂಕಿನ 55 ಸರಕಾರಿ ಶಾಲೆಗಳಲ್ಲಿ 5.50 ಕೋಟಿ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಹೈಟೆಕ್ ಶೌಚಾಲಯ ಲೋಕಾರ್ಪಣೆ ಕಾರ್ಯಕ್ರಮ ನ.2 ರಂದು ನಡೆಯಿತು.
ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವ ನಾಗೇಶ್ ಇವರು ಉದ್ಘಾಟನೆ ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು.
ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು, MRPL ನ ಮ್ಯಾನೇಜಿಂಗ್ ಡೈರೆಕ್ಟರ್ ಎಂ ವೆಂಕಟೇಶ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕೃಷ್ಣ ಹೆಗ್ಡೆ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಸಚಿವರ ಆಪ್ತ ಕಾರ್ಯದರ್ಶಿ ರವಿ ಕುಮಾರ್, ಡಿಡಿಪಿಐ ಮಲ್ಲೇ ಸ್ವಾಮಿ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ 55 ಶಾಲೆಗಳ ಮುಖ್ಯೋಪಾಧ್ಯಾಯರುಗಳು, ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರುಗಳು, ಶಾಲಾ ವ್ಯಾಪ್ತಿಯ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ , ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸದಸ್ಯರುಗಳು ಭಾಗವಹಿಸಿದ್ದರು.
ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಎಸ್ ವಿರೂಪಾಕ್ಷಪ್ಪ ಸ್ವಾಗತಿಸಿದರು. ಶಾಸಕ ಹರೀಶ್ ಪೂಂಜ ಅವರೇ ಪ್ರಸ್ತಾವನೆಗೈದರು.
ಸುಬ್ರಾಯ ಭಟ್ ಮತ್ತು ಗಣೇಶ್ ಗೌಡ ಉಜಿರೆ ಗೌರವಾರ್ಪಣೆ ನೆರವೇರಿಸಿದರು. ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು. ಕೆ ಧರಣೇಂದ್ರ ಜೈನ್ ವಂದನಾರ್ಪಣೆಗೈದರು.