ಬೆಳ್ತಂಗಡಿ; ಕಣಿಯೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಹಾಗೂ ಹಾಲಿ ಉಪಾಧ್ಯಕ್ಷ ಸುನಿಲ್ ಸಾಲ್ಯಾನ್ ಸೋಮವಾರ ಮುಂಜಾನೆ 3 ಗಂಟೆಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಲ್ಲಿ ಓರ್ವರಾಗಿದ್ದ ಸುನಿಲ್ ಸಾಲಿಯಾನ್ ಅವರು ಗ್ರಾ.ಪಂ ಅಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಕೋವಿಡ್ ಕಾಲಘಟ್ಟದಲ್ಲಿ ರೋಗ ನಿಯಂತ್ರಣಕ್ಕಾಗಿ ಗ್ರಾಮ ವ್ಯಾಪ್ತಿಯಲ್ಲಿ ಮಾಸ್ಕ್ ವಿತರಣೆ ಮತ್ತು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಮಾದರಿಯಾಗಿ ಅನುಷ್ಠಾನಿಸಿದ್ದರು.
ಮೃತರ ಮನೆಗೆ ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ತಿಳಿಸಿ ದೈರ್ಯ ತುಂಬಿದರು.ಈ ಸಂದರ್ಭ ತಣ್ಣೀರುಪಂಥ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಜಯವಿಕ್ರಮ ಕಲ್ಲಾಪು, ಅಲ್ಪಸಂಖ್ಯಾತ ಘಟಕದ ನಿಕಟಪೂರ್ವ ಅಧ್ಯಕ್ಷ ಅಯೂಬ್ ಡಿ.ಕೆ ಮತ್ತಿತರರು ಜೊತೆಗಿದ್ದರು.