ಬೆಳ್ತಂಗಡಿ; ಸ್ಥಳೀಯ ಸಂಸ್ಥೆಯ ಪ್ರತಿನಿಧಿಗಳ ಮೂಲಕ ವಿಧಾನ ಪರಿಷತ್ ಗೆ ಆಯ್ಕೆಯಾಗುವ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಮಂಜುನಾಥ ಭಂಡಾರಿ ಅವರ ಚುನಾವಣಾ ಪ್ರಚಾರದ ಅಂಗವಾಗಿ ಮಹತ್ವದ ಸಭೆಯು ಇಂದು ಆಶಾ ಸಾಲಿಯಾನ್ ಸಭಾಂಗಣದಲ್ಲಿ ಜರುಗಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ರಂಜನ್ ಜಿ ಗೌಡ ಮತ್ತು ಶೈಲೇಶ್ ಕುಮಾರ್ ಕುರ್ತೋಡಿ ನೇತೃತ್ವ ವಹಿಸಿದ್ದರು.ಮಾಜಿ ಸಚಿವ ಕೆ ಗಂಗಾಧರ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಎಮ್‌ಎಲ್‌ಸಿ ಹರೀಶ್ ಕುಮಾರ್, ಮಾಜಿ ಶಾಸಕ ವಸಂತ ಬಂಗೇರ, ಜಿ.ಪಂ ಮಾಜಿ ಉಪಾಧ್ಯಕ್ಷ ಎಂ. ಎಸ್ ಮುಹಮ್ಮದ್, ಪಕ್ಷದ ಅಭ್ಯರ್ಥಿ ಮಂಜುನಾಥ್ ಭಂಡಾರಿ, ವೀಕ್ಷಕರಾದ ಕೃಷ್ಣಮೂರ್ತಿ, ಜಯರಾಜ್, ಜಿಲ್ಲಾ ಅಲ್ಪ ಅಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಜಶೇಖರ ಅಜ್ರಿ ಜಿ.ಪಂ ಮಾಜಿ ಸದಸ್ಯ ಶೇಖರ
ಕುಕ್ಕೇಡಿ, ಕಾರ್ಮಿಕ ಘಟಕದ ಅಬ್ದುಲ್ ರಹಿಮಾನ್ ಪಡ್ಪು, ಚಿದಾನಂದ ಎಲ್ದಕ್ಕ, ಎ.ಸಿ ಮ್ಯಾಥ್ಯೂ ಮತ್ತಿತರ ನಾಯಕರು ಭಾಗಿಯಾಗಿದ್ದರು.