Posts

ಬಾಬರಿ ಮಸ್ಜಿದ್ ಪುನರ್ ನಿರ್ಮಾಣಕ್ಕೆ ಒತ್ತಾಯಿಸಿ SDPI ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

0 min read




ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ, ಬಾಬರಿ ಮಸ್ಜಿದ್ ಪುನರ್ ನಿರ್ಮಾಣಕ್ಕೆ ಒತ್ತಾಯಿಸಿ ಬೆಳ್ತಂಗಡಿ ತಾಲೂಕಿನ ಸುನ್ನತ್ ಕೆರೆ ಜಂಕ್ಷನ್ ನಲ್ಲಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನಿಸಾರ್ ಕುದ್ರಡ್ಕ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಕ್ಷೇತ್ರ ಸಮಿತಿ ಕಾರ್ಯದರ್ಶಿ ನಿಝಾಮ್ ಗೇರುಕಟ್ಟೆ ಮಾತನಾಡುತ್ತಾ "ಬಾಬರಿ ಮಸೀದಿ ಧ್ವಂಸವು ಸ್ವತಂತ್ರ ಭಾರತ ಕಂಡ ಎರಡನೇ ಭಯೋತ್ಪಾದಕ ಕೃತ್ಯವಾಗಿದೆ. ಸುಪ್ರೀಂ ಕೋರ್ಟ್ ಅನ್ಯಾಯದ ತೀರ್ಪು ನೀಡಿದೆ. ಆರೋಪಿಗಳಿಗೆ ಶಿಕ್ಷೆಯಾಗಬೇಕು ಹಾಗೂ ಧ್ವಂಸಗೈದ ಸ್ಥಳದಲ್ಲೇ ಬಾಬರಿ ಮಸೀದಿ ಪುನರ್ನಿರ್ಮಿಸಬೇಕು" ಎಂದು ಆಗ್ರಹಿಸಿದರು. ಉಪಾಧ್ಯಕ್ಷರಾದ ಹನೀಫ್ ಪುಂಜಲ್ ಕಟ್ಟೆ, ಸಮಿತಿ ಸದಸ್ಯರಾದ ಸಾಲಿ ಮದ್ದಡ್ಕ, ಕುವೆಟ್ಟು ಬ್ಲಾಕ್ ಕಾರ್ಯದರ್ಶಿ ಸಮೀಮ್ ಯೂಸುಫ್, ಕುವೆಟ್ಟು ಗ್ರಾಮ ಸಮಿತಿ ಅಧ್ಯಕ್ಷ ದಾವೂದ್ ಜಿ.ಕೆರೆ ಉಪಸ್ಥಿತರಿದ್ದರು. 

ನವಾಝ್ ಸುನ್ನತ್ ಕೆರೆ ಯವರ ಬಾಬರಿ ಮಸ್ಜಿದ್ ಹಾಡಿನೊಂದಿಗೆ ಪ್ರತಿಭಟನೆ ಯನ್ನು ಕೊನೆಗೊಳಿಸಲಾಯಿತು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment