ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಗಮನಹರಿಸುವಂತೆ ಬೆಳ್ತಂಗಡಿ ತಾಕೂಕು ಘಟಕದ ವತಿಯಿಂದ ಸೋಮವಾರ ಶಾಸಕ ಹರೀಶ್ ಪೂಂಜ ಅವರ ಮೂಲಕ ಸರಕಾರಕ್ಕೆ ಬೇಡಿಕೆಯ ಮನವಿ ಸಲ್ಲಿಸಲಾಯಿತು.
ಮುಖ್ಯವಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಹಾಗೂ ಭತ್ಯೆ ಹಾಗೂ ನೂತನ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಮನವಿಯಲ್ಲಿ ಸರ್ಕಾರಕ್ಕೆ ಮನವರಿಕೆ ಮಾಡಲು ಶಾಸಕರ ಗಮನಸೆಳೆಯಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಮಿತಿ ಅಧ್ಯಕ್ಷ ಜಯರಾಜ್ ಜೈನ್, ಗೌರವಾಧ್ಯಕ್ಷ ಜಯಕೀರ್ತಿ ಜೈನ್ ಹಾಗೂ ತಾಲೂಕು ಸಮಿತಿ ಪದಾಧಿಕಾರಿಗಳು, ನಿರ್ದೇಶಕರುಗಳು ಉಪಸ್ಥಿತರಿದ್ದರು. ಜೊತೆಗೆ ವಿವಿಧ ಇಲಾಖೆಗಳ ಸಂಘದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.