ಬೆಳ್ತಂಗಡಿ; ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಇದರ ವತಿಯಿಂದ ಎರಡು ದಿನಗಳಲ್ಲಿ ನಡೆಯಲಿರುವ 3 ನೇ ರಾಜ್ಯ ಅಧಿವೇಶನ ಉಜಿರೆ ಜನಾರ್ದನ ದೇವಸ್ಥಾನದ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಶನಿವಾರ ಚಾಲನೆಗೊಂಡಿತು.
ನುಡಿ ಸಾಮ್ರಾಜ್ಯದಲ್ಲಿ ಸ್ವರಾಜ್ಯ ಧ್ಯೇಯದೊಂದಿಗೆ ಮುಂದಿನ 3 ವರ್ಷಗಳಿಗೆ ದಿಕ್ಸೂಚಿಯಾಗಬಲ್ಲ ಈ ಅಧಿವೇಶನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು.ಅಧ್ಯಕ್ಷತೆಯನ್ನು ಸಾಹಿತಿಗಳಾದ ಡಾ.ನಾ ಮೊಗಸಾಲೆ ವಹಿಸಿದ್ದರು.ವೇದಿಕೆಯಲ್ಲಿ ಸಮ್ಮೇಳನದ ಸ್ವಾಗತ ಸಮಿತಿ ಗೌರವಾಧ್ಯಕ್ಷ, ಇಂಡಿಯನ್ ರೆಡ್‌ಕ್ರಾಸ್ ಸಂಸ್ಥೆಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಉಪಸ್ಥಿತರಿದ್ದರು.
ಸಮ್ಮೇಳನ ಸಮಿತಿ ಸಂಚಾಲಕ ಡಾ. ಮಾಧವ ಎಂ.ಕೆ ಸ್ವಾಗತಿಸಿದರು.ಸಮ್ಮೇಳನದ ಆರಂಭದಲ್ಲಿ ಶಾರದೆಯ ಪ್ರಾರ್ಥನೆ ನಡೆಯಿತು. ಸ್ವಯಂ ಸೇವಕ ಸಂಘದ ಪ್ರಚಾರಕ್ ಕೃಷ್ಣ ಪ್ರಸಾದ್ ಬದಿ ರಚಿಸಿದ ಅಧಿವೇಶನ ಗೀತೆಯನ್ನು ನಂದಿನಿ ಹಾಡಿದರು. ಅಖಿಲ ಭಾರತೀಯ ಸಾಹಿತ್ಯ ಪರಿಷದ್ ರಾಜ್ಯ ಉಪಾಧ್ಯಕ್ಷ ಹರಿಪ್ರಕಾಶ್ ಕೋಣೆಮನೆ ಪ್ರಸ್ತಾವನೆಗೈದರು. ಶಾಂತಾರಾಮ ಶೆಟ್ಟಿ ವಂದಿಸಿದರು. ಭ.ರಾ ವಿಜಯಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.