Posts

ಪಾಣಕ್ಕಾಡ್ ಸಯ್ಯಿದ್ ಶಿಹಾಬ್ ತಂಙಳ್ ನಿಧನಕ್ಕೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಲೀಂ ಗುರುವಾಯನಕೆರೆ ಸಂತಾಪ

0 min read

ಬೆಳ್ತಂಗಡಿ: ಇಸ್ಲಾಮಿಕ್ ಉಲಮಾ ಶಿರೋಮಣಿಗಳಲ್ಲಿ ಒಬ್ಬರೂ, ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಇದರ ಉಪಾಧ್ಯಕ್ಷರೂ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕೇರಳ ರಾಜ್ಯಾಧ್ಯಕ್ಷರೂ ಆಗಿರುವ ಸಯ್ಯಿದ್ ಪಾಣಕ್ಕಾಡ್ ಶಿಹಾಬ್ ತಂಙಳ್ ಅವರ ನಿಧನವಾರ್ತೆ ದುಃಖಕರವಾಗಿದೆ. 

ಹಲವಾರು ಮೊಹಲ್ಲಾಗಳ ಖಾಝಿ ಸ್ಥಾನವನ್ನು ಅಲಂಕರಿಸಿದ ತಂಙಳ್ , ರಾಜಕೀಯ ರಂಗದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ್ದರು. ತಂಙಳ್ ರ ಜೀವನ ನಮಗೆಲ್ಲರಿಗೂ ಮಾದರಿಯಾಗಲಿ , ತಂಙಳ್ ರ ಪರಲೋಕ ಜೀವನ ಸುಖಕರವಾಗಿರಲಿ ಎಂದು ಸೃಷ್ಟಿಕರ್ತನಲ್ಲಿ ಪ್ರಾರ್ಥಿಸುತ್ತಿದ್ದೇನೆ ಎಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನಗರ ಅಧ್ಯಕ್ಷ ಸಲೀಂ ಗುರುವಾಯನಕೆರೆ ಸಂತಾಪ ಸೂಚಿಸಿದ್ದಾರೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

You may like these posts

Post a Comment