Posts

ಧರ್ಮಸ್ಥಳ ಸಮೀಪ ರಸ್ತೆಗೆ ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೆ ಸಾವು

0 min read


ಬೆಳ್ತಂಗಡಿ: ಧರ್ಮಸ್ಥಳದಿಂದ ನೇತ್ರಾವತಿ ಸ್ನಾನಘಟ್ಟಕ್ಕೆ ಬರುವ ಹಾದಿಯಲ್ಲಿ ರಸ್ತೆ ಮೇಲೆ ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆದ ಬೈಕ್ ಸವಾರರೊಬ್ಬರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಘಟನೆಯಲ್ಲಿ ಓಡಿಲ್ನಾಲ ಗ್ರಾಮದ ಮುಗುಳಿಚತ್ರ ನಿವಾಸಿ ವಸಂತ್ ಕುಮಾರ್ ಜೈನ್ (42) ಸ್ಥಳದಲ್ಲೆ ದಾರುಣವಾಗಿ ಸಾವನ್ನಪ್ಪಿದವರು.



ಕಳೆದ ಶುಕ್ರವಾರವಷ್ಟೇ ಧರ್ಮಸ್ಥಳ ನೇತ್ರಾವತಿಯಲ್ಲಿ ಹೊಟೇಲ್ ಆರಂಭಿಸಿದ್ದ ಅವರು ಬೆಳಿಗ್ಗೆ  ದರ್ಮಸ್ಥಳದಲ್ಲಿದ್ದ ಬಾಡಿಗೆ ಮನೆಯಿಂದ ಬೈಕಿನಲ್ಲಿ ಆಗಮಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಅಪಘಾತವಾದ ತಕ್ಷಣ ರಸ್ತೆಗೆ ಎಸೆಯಲ್ಪಟ್ಟ ಅವರ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಹೆಲ್ಮೆಟ್ ಧರಿಸದೇ ಇರುವುದರಿಂದ ತಲೆಗೆ ಹೆಚ್ಚಿನ ಏಟು ಬಿದ್ದು ಸಾವು ಸಂಭವಿಸಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಉಪನಿರೀಕ್ಷಕ ಓಡಿಯಪ್ಪ ಗೌಡ ಸಹಿತ ಪೊಲೀಸ್ ದಿಬಂದಿ ಭೇಟಿ ನೀಡಿ ಪರಿಶೀಲನೆ ಪ್ರಕರಣ‌ ದಾಖಲಿಸಿಕೊಂಡಿದ್ದಾರೆ.

ಮೃತರಿಗೆ ತಂದೆ,‌ಪತ್ನಿ, ಸಣ್ಣ ಮಗು ಸಹಿತ ಆರು ಜನ ಸಹೋದರರು, ಮೂವರು ಸಹೋದರಿಯರು‌ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment