ಬೆಳ್ತಂಗಡಿ: ಚಾರ್ಮಾಡಿ ಪಾಂಡಿಕಟ್ಟೆ ಎಂಬಲ್ಲಿ ಬೈಕ್‌ಗಳ ಮಧ್ಯೆ ನಡೆದ ಅಪಘಾತದ ವೇಳೆ ರಸ್ತೆಗೆ ಎಸೆಯಲ್ಪಟ್ಟ ಸವಾರನ ಮೇಲೆ ಹಿಂಬದಿಯಿಂದ ಬಂದ ಟ್ರಕ್ ಹರಿದು ಸ್ಥಳೀಯ ಇಪ್ಪತ್ತೊಂದರ ಹರೆಯದ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾತ್ರಿ ವೇಳೆ ನಡೆದಿದೆ.
ಮೃತ ಯುವ ಕಚಾರ್ಮಾಡಿ ಮೇಗಿನಮನೆ ಇಸ್ಮಾಯಿಲ್ ಅವರ ಪುತ್ರನಾಗಿದ್ದಾರೆ.
ಚಾರ್ಮಾಡಿ ಸಮೀಪ ತನ್ನ ಸ್ನೇಹಿತನ ಮನೆಗೆಂದು ತೆರಳಿ ಹಿಂದಿರುಗುತ್ತಿದ್ದ ವೇಳೆ ಎದುರು ಬದಿಯಿಂದ ಬರುತ್ತಿದ್ದ ಬೈಕ್ ಗೆ ಇವರು ಪ್ರಯಾಣಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದ್ದು, ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಅವರ ಮೇಲೆ ಹಿಂದಿನಿಂದ ಬರುತ್ತಿದ್ದ ಟ್ರಕ್ ಹರಿದು ಈ ಅವಘಡ ಸಂಭವಿಸಿದೆ.
ಅಪಘಾತದ ವಿವರ ಅರಿಯುತ್ತಿದ್ದಂತೆ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಜಮಾಯಿಸಿದ್ದರು. ವಿವರ ಅರಿತ ಬೆಳ್ತಂಗಡಿ ಸಂಚಾರಿ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಅಗತ್ಯ ಕಾನೂನು ಕ್ರಮ ಜರುಗಿಸಿದ್ದಾರೆ.
ನಝೀರ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ
ಮೃತರು ತಂದೆ, ತಾಯಿ ಹಾಗೂ ಓರ್ವ ಸಹೋದರ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
ವರದಿ; ಅಚ್ಚು ಮುಂಡಾಜೆ