Posts

ಜುಲೈ 24 ರಂದು ಎಸ್ಸೆಸ್ಸೆಫ್ ಕ್ಯಾಂಪಸ್ ಅಸೆಂಬ್ಲಿ ಕಾರ್ಯಕ್ರಮ

1 min read

ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ (ಎಸ್ಸೆಸ್ಸೆಫ್) ನೇತೃತ್ವದಲ್ಲಿ ರಾಜ್ಯಾದ್ಯಂತ ಜಿಲ್ಲಾ ಮಟ್ಟದಲ್ಲಿ ನಡೆಯಲಿರುವ ಕ್ಯಾಂಪಸ್ ಅಸೆಂಬ್ಲಿ ಕಾರ್ಯಕ್ರಮವು ದ.ಕ ಜಿಲ್ಲೆ (ಈಸ್ಟ್)  ವತಿಯಿಂದ ಜುಲೈ 24 ರಂದು ಸುಳ್ಯದ ಗೂನಡ್ಕ ಸಜ್ಜನ ಸಭಾಂಗಣ, ಬೀಜದಕಟ್ಟೆ ಯಲ್ಲಿ ನಡೆಯಲಿದೆ ಎಂದು ಸಮಿತಿಯ ಅಧಿಕೃತ ಪ್ರಕಟಣೆ ಯಲ್ಲಿ ತಿಳಿಸಲಾಗಿದೆ. 

ನೈತಿಕತೆ, ಸಮಗ್ರತೆ, ಸಮರ್ಪಣೆ ಎಂಬ ಧ್ಯೇಯ ದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಜಿಲ್ಲಾ ವ್ಯಾಪ್ತಿಯ ಐದು ಡಿವಿಷನ್ ಗಳಿಂದ ಸುಮಾರು 500 ರಷ್ಟು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಬೆಳಿಗ್ಗೆ 7 ಗಂಟೆಗೆ ಝಿಯಾರತ್ ನೊಂದಿಗೆ ಪ್ರಾರಂಭವಾಗಿ ನಂತರ ಧ್ವಜಾರೋಹಣ, ಉದ್ಘಾಟನಾ ಸಮಾರಂಭ, ಅಧ್ಯಾತ್ಮಿಕ ತರಗತಿ, ಮೋಟಿವೇಶನ್, ಪ್ಯಾನೆಲ್ ಚರ್ಚೆ, ಕೇರಿಯರ್ ಗೈಡೆನ್ಸ್ ಹಾಗೂ ಸಮಾರೋಪ ಸಮಾರಂಭ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಜಿ.ಎಂ.ಮುಹಮ್ಮದ್ ಕಾಮಿಲ್ ಸಖಾಫಿ ಉಸ್ತಾದ್, ರಾಶಿದ್ ಬುಖಾರಿ ಕೇರಳ, ನೌಫಲ್ ಸಖಾಫಿ ಕಳಸ, ಡಾ. ಸಿ.ಎಮ್ ಹನೀಫ್ ಬೆಳ್ಳಾರೆ, ಸಿ ಎನ್ ಜಾಫರ್ ಕಾಸರಗೋಡು, ರಖೀಬ್ ಮಾಸ್ಟರ್ ಕನ್ನಂಗಾರ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಉದ್ಘಾಟಕರಾಗಿ ಸಜ್ಜನ ಪ್ರತಿಷ್ಟಾನ ಬೀಜದಕಟ್ಟೆ ಇದರ ಸ್ಥಾಪಕರೂ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರೂ ಆದ ಡಾ! ಉಮರ್ ಬೀಜದಕಟ್ಟೆ ಭಾಗವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಕ್ಫ್ ಬೋರ್ಡ್ ಅಧ್ಯಕ್ಷರಾದ ಶಾಫಿ ಸಅದಿ, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರಾದ ಅಬ್ದುಲ್ ಲತೀಫ್ ಸಅದಿ ಶಿವಮೊಗ್ಗ, ಪ್ರ.ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ, ಕೋಶಾಧಿಕಾರಿ ಹಾಫಿಳ್ ಸುಫ್ಯಾನ್ ಸಖಾಫಿ, ಕ್ಯಾಂಪಸ್ ಕಾರ್ಯದರ್ಶಿ ಶರೀಫ್ ಕೊಡಗು ಮೊದಲಾದವರು ಭಾಗವಹಿಸಲಿದ್ದಾರೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment