Posts

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆ

1 min read

ಬೆಳ್ತಂಗಡಿ: ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ವಾರ್ಷಿಕ ಸಭೆಯು ಜು.16 ರಂದು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ನಡೆಯಿತು.

ಸಂಘಟನೆಯ ಅಧ್ಯಕ್ಷ ಹನೀಫ್  ವರ್ಷಾ ಅಧ್ಯಕ್ಷತೆ ವಹಿಸಿದ್ದರು.

2021-22ನೇ ಸಾಲಿನ ವರದಿಯನ್ನು ಪ್ರಧಾನ ಕಾರ್ಯದರ್ಶಿ ಇರ್ಫಾನ್ ಹಂಝ ಮಂಡಿಸಿದರು.

ಈ ಸಂದರ್ಭದಲ್ಲಿ ಮುಂದಿನ ಸಾಲಿನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ, ಪ್ರಧಾನ  ಕಾರ್ಯದರ್ಶಿಯಾಗಿ ಹನೀಫ್ ವರ್ಷಾ,  ಉಪಾಧ್ಯಕ್ಷರಾಗಿ ಮುಹಮ್ಮದ್ ಕುದ್ರಡ್ಕ, ಜೊತೆಕಾರ್ಯದರ್ಶಿಯಾಗಿ  ಶೈರೋಝ್ ಉದಯ ನಗರ, ಕೋಶಾಧಿಕಾರಿಯಾಗಿ ರಶೀದ್ ಸಂಜಯ ನಗರ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಅಕ್ಬರ್ ಬೆಳ್ತಂಗಡಿ, ಬಶೀರ್, ಮೊಯಿದಿನ್ ಬಿ.ಎ, ಗಲ್ಫ್ ಪ್ರತಿನಿಧಿಗಳಾಗಿ ಅಬ್ಬಾಸ್ ಸೌದಿ ಅರೇಬಿಯಾ, ಶರೀಫ್ ಸೌದಿ ಅರೇಬಿಯಾ, ನಝೀರ್ ಅಬುದಾಬಿ, ಅಬ್ಬಿ ಕತಾರ್ ಇವರನ್ನು ಸರ್ವಾನುಮತದಿಂದ ಆರಿಸಲಾಯಿತು.

ಗಣ್ಯ ಅತಿಥಿಗಳಾಗಿ ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ನಝೀರ್ ಬಿ.ಎ, ಕಾಂಗ್ರೆಸ್ ಪಕ್ಷದ ಮುಖಂಡರಾದ ಮೆಹಬೂಬ್ ಸಂಜಯನಗರ, ಎಸ್‌ಡಿಪಿಐ ಪಕ್ಷದ ಮುಖಂಡ ನವಾಝ್ ಶರೀಫ್ ಕಟ್ಟೆ ಹಾಗೂ ಸಂಜಯ್ ಗ್ಲೋಬಲ್ ಫೌಂಡೇಶನ್ ಸದಸ್ಯರು ಉಪಸ್ಥಿತರಿದ್ದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment