ಬೆಳ್ತಂಗಡಿ:ರಾಜ್ಯಸಭಾ ಸದಸ್ಯರಾಗಿ ನೇಮಕಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶ್ರೀಧರ್ ಜಿ. ಭಿಡೆ, ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ನಿರ್ದೇಶಕರಾದ ಸೋಮನಾಥ ಬಂಗೇರ ವರ್ಪಾಳೆ, ರಾಮನಾಯ್ಕ, ಅಬ್ರಹಾಂ ಅರಸಿನಮಕ್ಕಿ, ಕೇರಿಮಾರ್ ಬಾಲಕೃಷ್ಣ ಗೌಡ, ಜಯಶ್ರೀ ಡಿ.ಎಂ ಗೌಡ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಬೆಂಗೆತ್ಯಾರು ಇವರುಗಳು ಉಪಸ್ಥಿತರಿದ್ದರು.