Posts

ಕೊಲೆಗಡುಕರನ್ನ ಕೂಡಲೇ ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸಿ: ರಕ್ಷಿತ್ ಶಿವರಾಂ

0 min read

ಬೆಳ್ತಂಗಡಿ: ಬೆಳ್ಳಾರೆ ಯಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರು ಕೊಲೆ ಮಾಡಿದ ಕೊಲೆಗಡುಕರನ್ನ  ಕೂಡಲೇ ಬಂಧಿಸಿ  ಉಗ್ರ ಶಿಕ್ಷೆಗೆ ಒಳಪಡಿಸಬೇಕು ಎಂದು ಬೆಳ್ತಂಗಡಿ ಬೆಸ್ಟ್  ಫೌಂಡೇಶನ್ ಅಧ್ಯಕ್ಷರೂ ಆಗಿರುವ  ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಪತ್ನಿಯೊಂದಿಗೆ ಪ್ರವೀಣ್ 

ಪ್ರವೀಣ್ ನೆಟ್ಟಾರು ಅವರು ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ಇದ್ದರು. ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಎಲ್ಲಾ  ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.ಪ್ರವೀಣ್ ನೆಟ್ಟಾರು ಇವರ ಅಗಲುವಿಕೆಯು ತುಂಬಾ ವಿಷಾದನೀಯ. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ. ಅವರ ಕುಟುಂಬದವರಿಗೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೊಲೆಗಡುಕರನ್ನು  ಕೂಡಲೇ ಬಂಧಿಸಿ  ಉಗ್ರ ಶಿಕ್ಷೆಗೆ ಒಳಪಡಿಸಬೇಕೆಂದು‌ ಒತ್ತಾಯಿಸುತ್ತೇನೆ. ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ. ಕಾನೂನುಬದ್ಧ ತನಿಖೆಯಾಗಿ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು  ಎಂದು ಆಗ್ರಹಿಸುತ್ತೇನೆ ಎಂದೂ ಅವರು ಪ್ರತಿಕ್ರಿಯಿಸಿದ್ದಾರೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

You may like these posts

Post a Comment