Posts

ಕಾಜೂರು ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯೋತ್ಸವ

1 min read


ಬೆಳ್ತಂಗಡಿ: ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾಶರೀಫ್ ಆಡಳಿತಕ್ಕೊಳಪಟ್ಟ ಶಿಕ್ಷಣ ಸಂಸ್ಥೆಗಳಲ್ಲಿ ಆ.15 ರಂದು ರಾಷ್ಟ್ರ ಧ್ವಜಾರೋಹಣ ವನ್ನು ಸಂಸ್ಥೆಯ ಅಧ್ಯಕ್ಷ ಕೆ.ಯು ಇಬ್ರಾಹಿಂ ಮತ್ತು ಪ್ರಧಾನ ಧರ್ಮ ಗುರುಗಳಾದ ಸಯ್ಯಿದ್ ಕಾಜೂರು ತಂಙಳ್ ನೆರವೇರಿಸಿದರು.  

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟಕೋಯ ತಂಙಳ್ ಕುಂಬೋಳ್ ನೆರವೇರಿಸಿದರು. ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯ ವೈಧ್ಯಾಧಿಕಾರಿ ಡಾ. ಝುಲ್ಫಿಕರ್ ವಿಶೇಷ ಅತಿಥಿಯಾಗಿದ್ದರು. ಕಾಜೂರು ಶಿಕ್ಷಣ ಸಂಸ್ಥೆಗಳ ಅಕಾಡಮಿಕ್ ಡೈರೆಕ್ಟರ್ ಕೆ.ಎಮ್ ಅಬೂಬಕ್ಕರ್ ಸಿದ್ದೀಕ್ ಮೋಂಟುಗೊಳಿ ಸಂದೇಶ ಭಾಷಣ ಮಾಡಿದರು. 


ಸಮಾರಂಭದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಕರ್ನಾಟಕ ರಾಜ್ಯ ವಕ್ಫ್ ಜಿಲ್ಲಾ ಸಲಹಾ ಸಮಿತಿ ಸದಸ್ಯರಾದ ಜೆ . ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು,‌ ಕೋಶಾಧಿಕಾರಿ ಕೆ.ಎಮ್ ಕಮಾಲ್, ಉಪಾಧ್ಯಕ್ಷ ಅಬ್ದುಲ್ ರಹಿಮಾನ್, ಸದಸ್ಯರಾದ ಎ.ಯು ಮುಹಮ್ಮದಾಲಿ, ಎನ್.ಎಂ ಯಾಕೂಬ್, ಅಬ್ದುಲ್ ಖಾದರ್, ಉಮರ್‌ಕುಂಞಿ, ಸಿದ್ದೀಕ್ ಕೆ.ಹೆಚ್, ಅಬ್ಬಾಸ್ ಎರ್ಮಾಲ್‌ಪಲ್ಕೆ, ಎಸ್‌ವೈಎಸ್ ಅಧ್ಯಕ್ಷ ಕೆ.ಎಮ್ ಅಬೂಬಕ್ಕರ್ , ಆರ್‌ಡಿಸಿ ಅಧ್ಯಕ್ಷ ಮುಹಮ್ಮದ್ ಶರೀಫ್, ಜಿ.ನಗರ ಮಸ್ಜಿದ್ ಅಧ್ಯಕ್ಷ ಉಸ್ಮಾನ್ ಪಗರೆ, ಡಿಡುಪೆ ಮಸ್ಜಿದ್ ಅಧ್ಯಕ್ಷ ಇಸ್ಮಾಯಿಲ್ ಮುಸ್ಲಿಯಾರ್, ಪಿಟಿಎ ಅಧ್ಯಕ್ಷ ಡಿ.ವೈ ಉಮರ್, ಕಾಜೂರು ಮದರಸ PTA ಅಧ್ಯಕ್ಷ  ರಾಝಿಕ್, ಮಾಜಿ ಅಧ್ಯಕ್ಷರುಗಳಾದ ಉಮರ್ ಸಖಾಫಿ ಮತ್ತು ಮುಹಮ್ಮದ್ ಸಖಾಫಿ, ಮುದರ್ರಿಸ್ ಇರ್ಫಾನ್ ಸಖಾಫಿ, ಸ್ವಲಾತ್ ಸಮಿತಿ ಅಧ್ಯಕ್ಷ ಅಬ್ದುಲ್ ಅಝೀಝ್ ಪಿ‌.ಎ, ಡಿ.ಬಿ ಮುಹಮ್ಮದ್ ದಿಡುಪೆ,‌ಕೆ.ಎಮ್ ಪುತ್ತಾಕ ಕುಕ್ಕಾವು, ಮೊದಲಾದವರು ಉಪಸ್ಥಿತರಿದ್ದರು.

ಜಿಲ್ಲಾ ವಕ್ಫ್ ಸಲಹಾ ಮಂಡಳಿ ಸದಸ್ಯರಾಗಿ ಸರಕಾರದಿಂದ ನೇಮಕಗೊಂಡ ಜೆ ಹೆಚ್ ಅಬೂಬಕ್ಕರ್ ಸಿದ್ದಿಕ್ ರವರಿಗೆ ಸನ್ಮಾನ

"ರಾಹ ಪಬ್ಲಿಕ್ ಸ್ಕೂಲ್" ವಿದ್ಯಾರ್ಥಿಗಳು, ಮಹಿಳಾ  ಶರೀಅತ್ ಕಾಲೇಜು, ರಹ್ಮಾನಿಯ ಪ್ರೌಢ ಶಾಲೆ ವಿದ್ಯಾರ್ಥಿಗಳು, ದರ್ಸ್ ವಿದ್ಯಾರ್ಥಿಗಳು, ಎಲ್ಲಾ ಸಿಬ್ಬಂದಿಗಳು, ಅಂಗ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರುಗಳು, ಸಿಬ್ಬಂದಿಗಳು, ಕಾಜೂರ್ ಜಮಾತ್ ಬಾಂಧವರು ಉಪಸ್ಥಿತರಿದ್ದರು.

ಇದೇ ವೇಳೆ PUC ಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಸನ್ಮಾನ, ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ನಡೆಯಿತು.

ಪ್ರಭಾರ ಮುಖ್ಯ ಶಿಕ್ಷಕಿ ಶಂಶಾದ್ ಕಾರ್ಯಕ್ರಮ ನಿರೂಪಿಸಿದರು. ಸದರ್ ಉಸ್ತಾದ್  ರಶೀದ್ ಮದನಿ ಸ್ವಾಗತಿಸಿದರು.  ಸಹ ಶಿಕ್ಷಕಿ ಕುಬುರಾ ಧನ್ಯವಾದವಿತ್ತರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment