ಬೆಳ್ತಂಗಡಿ; ಅತ್ಯುತ್ತಮ ಕಾರ್ಯದಕ್ಷತೆಗೆ ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಪುರಸ್ಕೃತರಾಗಿರುವ ಬೆಳ್ತಂಗಡಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ನಂದಕುಮಾರ್ ಎಂ.ಎಂ ಅವರನ್ನು ಆ.10 ರಂದು ಕಾಜೂರು ಆಡಳಿತ ಸಮಿತಿ ವತಿಯಿಂದ ಗೌರವಿಸಲಾಯಿತು.
ಬೆಳ್ತಂಗಡಿ ಠಾಣೆಗೆ ಆಗಮಿಸಿದ ಕಾಜೂರು ಆಡಳಿತ ಮಂಡಳಿ ಅಧ್ಯಕ್ಷ ಕೆ.ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿಯೂ ಆಗಿರುವ ಕರ್ನಾಟಕ ವಕ್ಫ್ ಜಿಲ್ಲಾ ಸಲಹಾ ಸಮಿತಿ ಸದಸ್ಯ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು, ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಇವರು ಶಾಲು ಹೊದಿಸಿ ಹೂ ಗುಚ್ಚ ನೀಡಿ ಕಾಜೂರಿನ ಗೌರವ ಸಮರ್ಪಿಸಿದರು..