Posts

ಚಿಕ್ಕಮಗಳೂರಿನ ರಸ್ತೆ ಅಪಘಾತದಲ್ಲಿ ಅರಸಿನಮಕ್ಕಿಯ ಯುವಕ ದಾರುಣ ಬಲಿ

0 min read




ಬೆಳ್ತಂಗಡಿ : ಚಿಕ್ಕಮಗಳೂರಿನಲ್ಲಿ ಸರಕಾರಿ ಬಸ್ಸು ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ತುಂಬೆತಡ್ಕ ನಿವಾಸಿ, ಯುವಕ ಚೆನ್ನಕೇಶವ (28ವ.) ಅವರು ದಾರುಣವಾಗಿ ಮೃತಪಟ್ಟಿದ್ದಾರೆ.

ಘಟನೆ ಸೆ.22 ರಂದು ನಡೆದಿದೆ. 

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಎಕ್ಸ್ ರೇ ಟೆಕ್ನಿಷಿಯನ್ ಆಗಿದ್ದ ಚೆನ್ನಕೇಶವ ಅವರು ರಜೆಯ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದು, ಅಜ್ಜಿ ಮನೆಯಾದ ಚಿಕ್ಕಮಗಳೂರಿಗೆ ಹೋಗಿದ್ದರು. ಅಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಒಂದಕ್ಕೆ ಹೋಗುತ್ತಿದ್ದಾಗ ಇವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಅವರು ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಮೃತಪಟ್ಟರು.

ಮೃತರು ತಂದೆ ಸಂಜೀವ ರಾಣ್ಯ, ತಾಯಿ ಶೋಭಾ, ತಂಗಿ ಪುಷ್ಪಲತಾ‌ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.  ಕಾನೂನು ಪ್ರಕ್ರಿಯೆ ಗಳನ್ನು ಮುಗಿಸಿದ ಬಳಿಕ ಮೃತದೇಹವನ್ನು ಕುಟುಂಬಸ್ತರಿಗೆ ಹಸ್ತಾಂತರಿಸಲಾಗಿದ್ದು, ಅವರ ಅಂತ್ಯಕ್ರಿಯೆಯು ತುಂಬೆತ್ತಡ್ಕದಲ್ಲಿ ಸೆ.23ರಂದು ನಡೆಸಲಾಗಿದೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment