Posts

ಅ.22 ರಂದು ಬೆಳ್ತಂಗಡಿ ಜ್ಞಾನ ನಿಲಯದಲ್ಲಿ ಕೆಎಸ್‌ಎಮ್‌ಸಿಎ ಪದಗ್ರಹಣ, ನಾಯಕತ್ವ ಶಿಬಿರ

1 min read

ಬೆಳ್ತಂಗಡಿ; ಕರ್ನಾಟಕ ಸಿರೋಮಲಬಾರ್ ಕ್ಯಾಥೋಲಿಕ್ ಅಸೋಸಿಯೆಷನ್ ಬೆಳ್ತಂಗಡಿ ಇದರ ನೂತನ ಪದಾಧಿಕಾರಿಗಳ

ಪದಗ್ರಹಣ ಮತ್ತು ನಾಯಕತ್ವ ತರಬೇತಿ ಶಿಬಿರ ಅಕ್ಟೋಬರ್ 22 ರಂದು ಬೆಳ್ತಂಗಡಿ ಜ್ಞಾನ ನಿಲಯದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಧರ್ಮಪ್ರಾಂತ್ಯದ ವ್ಯಾಪ್ತಿಯ 52 ಚರ್ಚ್ ನ ಆಯ್ದ 7 ರಿಂದ 10 ಮಂದಿ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಕೆಎಸ್‌ಎಮ್‌ಸಿಯೆ ಸಾರ್ವಜನಿಕ ಸಂಪರ್ಕಾಧಿಕಾರಿ ಪಿ.ಸಿ ಸೆಬಾಸ್ಟಿಯನ್ ಹೇಳಿದರು.

ಬೆಳ್ತಂಗಡಿ ನಗರದ ವಾರ್ತಾಭವನದಲ್ಲಿ ಬುಧವಾರ  ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ವಿವರ ನೀಡಿದರು.

ಉಡುಪಿ, ದ.ಕ, ಕೊಡಗು ಜಿಲ್ಲಾ ವ್ಯಾಪ್ತಿಯನ್ನೊಳಗೊಂಡ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಯಿ  ಬೆಳ್ತಂಗಡಿ ಅವರು ಉದ್ಘಾಟನೆಗೊಳಿಸಿ ಆಶೀರ್ವಚನ ನೀಡಲಿದ್ದಾರೆ. ಈ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ ಕುಮಾರ್, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ.  ಕೆಎಸ್‌ಎಮ್‌ಸಿ ಅಧ್ಯಕ್ಷ ಬಿಟ್ಟಿ ನೆಡುನಿಲಂ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆಎಸ್‌ಎಮ್‌ಸಿಎ ಕೇಂದ್ರ ಸಮಿತಿ ಕಾರ್ಯದರ್ಶಿ ಸೆಬಾಸ್ಟಿಯನ್ ಎಂ.ಜೆ, ಬೆಳ್ತಂಗಡಿ ವಲಯ ಅಧ್ಯಕ್ಷ ರೆಜಿ ಜೋರ್ಜ್, ವಲಯಾಧ್ಯಕ್ಷ ಸೆಬಾಸ್ಟಿಯನ್ ವಿ.ಟಿ  ಉಪಸ್ಥಿತರಿದ್ದರು.

ವರದಿ; ಅಚ್ಚು ಮುಂಡಾಜೆ


ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment